Traffic fine: ರಾಜ್ಯ ಸರಕಾರ ನೀಡಿದೆ ‘ಟ್ರಾಫಿಕ್ ದಂಡ’ ದ ಕುರಿತು ಮತ್ತೊಂದು ಬಿಗ್ ನ್ಯೂಸ್! ಭರ್ಜರಿ ರಿಯಾಯಿತಿ ಘೋಷಣೆ- ರಾಜ್ಯ ಸರಕಾರಿಂದ ಆದೇಶ!

Latest news good news state government has given big news about 'traffic fine'

Traffic fine: ವಾಹನ ಸವಾರರಿಗೆ ದಂಡ ಪಾವತಿ ದೊಡ್ದ ತಲೆನೋವಾಗಿ ಪರಿಣಮಿಸಿತ್ತು. ಇದೀಗ, ವಾಹನ ಸವಾರರಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ಸರ್ಕಾರ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಆದೇಶ ಹೊರಡಿಸಿದೆ.

14.06.2023 ರಂದು ನಡೆದ ಸಭೆಯ ತೀರ್ಮಾನದ ಅನುಸಾರ, 11.02.2023ರೊಳಗಿನ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ (Traffic fine )ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಮಾಡಲು 08.07.2023 ರವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಲು ಮನವಿ ಮಾಡಲಾಗಿತ್ತು.

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್ನಲ್ಲಿ 11.02.2023 ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಈ ರಿಯಾಯಿತಿಯು 09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಲಾಗಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರ ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿತ್ತು. ಇದೀಗ, ಪ್ರಕರಣಗಳ ದಂಡದ ಮೊತ್ತದಲ್ಲಿ ಇನ್ನೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಈ ಅವಕಾಶ ಕಲ್ಪಿಸಲಾಗಿದೆ.

Leave A Reply

Your email address will not be published.