HD Kumaraswamy: ವರ್ಗಾವಣೆ ದಂಧೆಯಲ್ಲಿ ಬರೋಬ್ಬರಿ 500 ಕೋಟಿ ಅದ್ಲು ಬದ್ಲು – ಕುಮಾರ ಸ್ವಾಮಿ ಸ್ಫೋಟಕ ಹೇಳಿಕೆ

Latest news politics HD Kumaraswamy statement about the transfer scam of officers

HD Kumaraswamy: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿರುವ ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಸೋಮವಾರ ಸುದ್ದಿಗಾರದಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾಗುವಷ್ಟರಲ್ಲೇ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ₹ 500 ಕೋಟಿ ಕೈ ಬದಲಾವಣೆ ಆಗಿದೆ, ಈ ಬಗ್ಗೆ ನನಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಕಾಂಗ್ರೆಸ್ ಗೆ ಹೊಸ ಶಾಕ್ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡಿಗಾಗಿ ಹುದ್ದೆಯ ವ್ಯವಹಾರ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ವರ್ಗಾವಣೆ ದಂಧೆ ಕುರಿತು ನಾನೊಬ್ಬನೇ ಮಾತನಾಡುತ್ತಿಲ್ಲ. ಅಧಿಕಾರಿಗಳು ಹಾದಿ–ಬೀದಿಯಲ್ಲಿ ಚರ್ಚಿಸುತ್ತಿದ್ದಾರೆ’ ಎಂದರು.

ಆದರೆ ಈ ಬಗ್ಗೆ ಮುಖ್ಯಮಂತ್ರಿ ಯಲ್ಲಿ ಕೇಳಿದರೆ, ವರ್ಗಾವಣೆ ದಂಧೆಯಲ್ಲಿ ನಾನು ತೊಡಗಿಲ್ಲ, ಬೇರೆ ಯಾರಾದರೂ ಹಾಗೆ ಮಾಡುತ್ತಿದ್ದರೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ಹೇಳಿದ್ದಾರೆ. ಮುಖ್ಯಮಂತ್ರಿಯೇ ಹೀಗೆ ಹೇಳಿದರೆ ಅರ್ಥವೇನು’ ಎಂದು ಕಿಡಿಕಾರಿದ್ದಾರೆ.

ಇನ್ನು ಈಗ ನಡೆಯುತ್ತಿರುವ ಯೋಜನೆಗಳ ಕಾಮಗಾರಿಗಳ ಒಟ್ಟು ಅಂದಾಜು ವೆಚ್ಚವನ್ನು ಶೇ.20-30ರಷ್ಟುಹೆಚ್ಚಳ ಮಾಡಿಕೊಳ್ಳಲಾಗುತ್ತಿದೆ. ಕಮಿಷನ್‌ ಹೊಡೆಯೋದಕ್ಕೆ ಏನು ಬೇಕೋ ಅದನ್ನು ಮಾಡಿಕೊಳ್ಳುತ್ತಿದ್ದಾರೆ. ಕೃಷಿ ಇಲಾಖೆಯಲ್ಲಿಯೇ 130 ಕೋಟಿ ರು. ಅವ್ಯವಹಾರ ನಡೆದಿದೆ.

ನಾನು ಯಾವತ್ತೂ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ. ನನ್ನ ವಿಚಾರದಲ್ಲಿ ಒಂದೇ ಒಂದು ವರ್ಗಾವಣೆ ಪ್ರಕರಣ ತೋರಿಸಿ ಸಾಬೀತು ಮಾಡಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಕುಮಾರಣ್ಣನ ವಾದ.

ಸರ್ಕಾರದಿಂದ ವರ್ಗಾವಣೆ ಕಿರುಕುಳಕ್ಕೊಳಗಾಗಿರುವ ಅಧಿಕಾರಿಗಳು ಸುಳ್ಳು ಹೇಳುತ್ತಾರೆಯೇ? ಇದಕ್ಕೆಲ್ಲಾ ಸಾಕ್ಷಿ ಸಂಗ್ರಹ ಮಾಡಲು ಸಾಧ್ಯವೇ? ಈ ರೀತಿಯಾದರೆ ರಾಜ್ಯ ಉಳಿಯುತ್ತಾ ಎಂದು ಕುಮಾರಸ್ವಾಮಿ ಕಿಡಿಕಾರಿದರು.

 

ಇದನ್ನು ಓದಿ: Vatal Nagaraj: ಪುರುಷರಿಗೂ ಉಚಿತ ಬಸ್, ಖಾತೆಗೆ 2000 ರೂ., ದನ ಕಾಯೋರಿಗೆ 1,000 ರೂಪಾಯಿ ? ಎಲ್ಲಿಂದ ಬಂತು ಈ ಐಡಿಯಾ ? 

Leave A Reply

Your email address will not be published.