Gruha lakshmi: ‘ಗೃಹಲಕ್ಷ್ಮೀ’ಗೆ ಅರ್ಜಿ ಹಾಕೋ ಯಾಜಮಾನಿಯರೇ ಎಚ್ಚರ.. ಯಾವುದೇ ಕಾರಣಕ್ಕೂ ಈ ಒಂದು ತಪ್ಪು ಮಾಡ್ಬೇಡಿ- ಮಾಡಿದ್ರೆ ಸಿಗಲ್ಲ 2 ಸಾವಿರ!!
Latest news congress guarantee schemes aware of this kind of scam before applying for Gruha lakshmi
ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರಕಾರವು ‘ಗೃಹಲಕ್ಷ್ಮಿ’ ಯೋಜನೆ ಆರಂಭಿಸಿದೆ. ನಿನ್ನೆ ತಾನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಅರ್ಜಿ ಹಾಕಲು ಚಾಲನೆ ನೀಡಲಿದ್ದಾರೆ. ಪ್ರತೀ ಮನೆಯ ಯಜಮಾನಿಯರು ಕೂಡ ಅರ್ಜಿ ಹಾಕಲು ಉತ್ಸಾಹ ತೋರುತತಿದ್ದಾರೆ. ಆದರೆ ಅರ್ಜಿದಾರರೇ ಎಚ್ಚರ! ಯಾಕೆಂದರೆ ಅರ್ಜಿ ಹಾಕೋ ಹುಮ್ಮಸ್ಸಲ್ಲಿ ನೀವು ಈ ತಪ್ಪು ಮಾಡಿದ್ರೆ ಯಾವುದೇ ಕಾರಣಕ್ಕೂ ನಿಮಗೆ 2000 ಸಿಗುವುದಿಲ್ಲ.
ಹೌದು, ಬಹು ನಿರೀಕ್ಷಿತ ಹಾಗೂ ಕಾತುರದಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (GruhaLakshmi Scheme) ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅರ್ಜಿ ಹಾಕಲು ತುಂಬಾ ಉತ್ಸಾಹದಲ್ಲಿರುವ ಮಹಿಳೆಯರು ಅರ್ಜಿ ಸಲ್ಲಿಸುವ ಮುನ್ನ ಎಚ್ವರಿಕೆ ವಹಿಸುವುದು ಈಗ ಅನಿವಾರ್ಯ ಆಗಿದೆ. ಅಂತೆಯೇ ಅರ್ಜಿ ಸಲ್ಲಿಸುವಾಗ ಏನೆಲ್ಲಾ ಮುಂಜಾಗ್ರತೆ ಕ್ರಮ ಬಹಿಸಬೇಕು?, ಯಾವೆಲ್ಲಾ ದಾಖಲೆಗಳು ಬೇಕು?, ಮೋಸ ಹೋಗದ ಹಾಗೆ ಅರ್ಜಿ ಸಲ್ಲಿಸುವುದು ಹೇಗೆ ? ಎಂಬ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
• ನಕಲಿ ಆಪ್‌ಗಳ ಬಗ್ಗೆ ಇರಲಿ ಎಚ್ಚರ ಇರಲಿ:
ಸರ್ಕಾರ ಈ ಯೋಜನೆಗಳನ್ನು ಘೋಷಣೆ ಮಾಡಿದಾಗಿನಿಂದಲೇ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಗೃಹಲಕ್ಷ್ಮಿ ಹೆಸರಿನ ಅನೇಕ ಆಪ್‌ಗಳು (Fake apps) ಕಾಣಿಸಿಕೊಂಡಿವೆ. ಆದರೆ ಇವೆಲ್ಲಾ ನಕಲಿ ಆಪ್‌ಗಳಾಗಿವೆ ಎಂಬುದು ನಿಮಗೆ ಗೊತ್ತಿರಲಿ. ಇವು ನಿಮ್ಮ ಖಾಸಗಿ ಮಾಹಿತಿಯನ್ನು ಕದಿಯುವುದರೊಂದಿಗೆ ನಿಮಗೆ ಹಣದ ವಂಚನೆ ಮಾಡುವ ಉದ್ದೇಶವನ್ನು ಹೊಂದಿರುತ್ತವೆ. ಹೀಗಾಗಿ ಗೃಹಲಕ್ಷ್ಮಿ ಸಂಬಂಧ ಯಾವುದೇ ನಕಲಿ ಆಪ್‌ಗಳನ್ನು ಇನ್‌ಸ್ಟಾಲ್ ಮಾಡಬೇಡಿ. ಸರ್ಕಾರ ತಿಳಿಸಿದಂತೆ ಅರ್ಜಿ ಸಲ್ಲಿಸಿ. ಗೊತ್ತಾಗದಿದ್ದಲ್ಲಿ ಸರ್ಕಾರವೇ ನೇಮಿಸಿದ ‘ಪ್ರಜಾ ಪ್ರತಿನಿಧಿಗಳ’ ಮೂಲಕ ಅರ್ಜಿ ಹಾಕಿ.
• ಯಾವುದೇ ಕಾಗದದ ಅರ್ಜಿಗಳು ಇರುವುದಿಲ್ಲ: ಇದೆಲ್ಲದಕ್ಕಿಂತ ಮಿಗಿಲಾಗಿ ನಕಲಿ ಅರ್ಜಿಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಕಾರಣಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(laxmi hebbalkar ) ಜನರನ್ನು ಎಚ್ಚರಿಸಿದ್ದು, ಅರ್ಜಿಗಳ ಮೂಲಕ ಈ ಯೋಜನೆಗೆ ಮನವಿ ಸಲ್ಲಿಸಲು ಅವಕಾಶ ಇಲ್ಲ ಎಂದು ಸ್ಪಷ್ಟನೆ ಸಹ ನೀಡಿದ್ದಾರೆ.
ಯಾವ ಕಡೆಗಳಲ್ಲಿ ಅರ್ಜಿ ಸಲ್ಲಿಸಬಹುದು?
ಗೃಹಲಕ್ಷ್ಮಿ ಯೋಜನೆಗೆ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಯಾರಿಗೆ ಹಣವಿಲ್ಲ?
ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಕುಟುಂಬದ ಮಹಿಳೆಯರ ಪೈಕಿ ಹಿರಿಯ ಸದಸ್ಯೆಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಆದರೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಮಹಿಳೆಯ ಪತಿ ಅಥವಾ ಪುತ್ರ ಜಿಎಸ್‌ಟಿ ಪಾವತಿದಾರ ಆಗಿದ್ದರೆ ಯೋಜನೆಯ ಹಣ ಸಿಗುವುದಿಲ್ಲ.
ನೋಂದಣಿ ವೇಳೆ ಸಮಸ್ಯೆಯಾಗದಂತೆ ಸರ್ಕಾರದ ಬಿಡುಗಡೆ ಮಾಡಿದ ಮಾರ್ಗಸೂಚಿ:
• ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ಯಾವುದೇ ಸಮಸ್ಯೆಯಾಗದಂತೆ ಪ್ರತಿ ನೋಂದಣಿ ಕೇಂದ್ರಕ್ಕೆ ಒಬ್ಬರಂತೆ ಮೇಲ್ವಿಚಾರಣೆ ಅಧಿಕಾರಿಯನ್ನು ನೇಮಿಸಲಾಗುತ್ತದೆ
• ಕೆಲವು ಸೂಕ್ಷ್ಮ ಪ್ರದೇಶ ಹಾಗೂ ಜನದಟ್ಟಣೆ ಹೆಚ್ಚಿರುವ ಕಡೆಗಳಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಯನ್ನೂ ನೇಮಿಸಲಾಗುತ್ತದೆ
• ನೋಂದಣಿ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಬ್ಯಾಟರಿ ಹಾಗೂ ಸುಸ್ಥಿತಿಯಲ್ಲಿರುವ ಪ್ರಿಂಟರ್ ವ್ಯವಸ್ಥೆ ಮಾಡಲಾಗುತ್ತೆ. ಇದರ ಸಂಪೂರ್ಣ ನಿರ್ವಹಣೆಯನ್ನು ಮೇಲ್ವಿಚಾರಣೆಯ ಅಧಿಕಾರಿಯೇ ನೋಡಿಕೊಳ್ಳಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪ್ರತಿ ತಾಲೂಕು ಕೇಂದ್ರಗಳಲ್ಲಿ ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಲಾಗುತ್ತದೆ
• ನೋಂದಣಿ ಕಾರ್ಯಕ್ಕೆ ಅಗತ್ಯವಿರುವ ಪ್ರಜಾಪ್ರತಿನಿಧಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತರಬೇತಿ ನೀಡಲಾಗುತ್ತೆ
• ಮಳೆ ಮತ್ತು ಬಿಸಿಲಿನ ಸಮಸ್ಯೆ ಇರದಂತೆ ಪ್ರತಿ ನೋಂದಣಿ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತದೆ
• ನೋಂದಣಿ ಕೇಂದ್ರಕ್ಕೆ ನಿಯೋಜಿಸಲಾದ ನೋಡಲ್ ಅಧಿಕಾರಿಯ ಮಾಹಿತಿಗಳನ್ನು ಇ-ಆಡಳಿತ ಇಲಾಖೆ ಒದಗಿಸುವ ಲಿಂಕ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.
ಸಹಾಯವಾಣಿ:
ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಲು ಮಹಿಳೆಯರಿಗೆ ಯಾವುದೇ ಸಮಸ್ಯೆಗಳು ಆಗದಂತೆ ಇವಿಷ್ಟು ಕ್ರಮಗಳನ್ನು ಅಧಿಕಾರಿಗಳು ಅನುಸರಿಸಬೇಕಾಗಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಏನಾದರೂ ಗೊಂದಲಗಳು ಇದ್ದರೆ ಹೆಲ್ಪ್ ಲೈನ್ ಸಂಖ್ಯೆ – 1902ಕ್ಕೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅಲ್ಲದೆ ಈ ಸಂಬಂಧ ಯಾವುದೇ ಮಾಹಿತಿಯನ್ನಾದರೂ ಕೇಳಿ ಪಡೆದುಕೊಳ್ಳಲು ಹಾಗೂ ವಂಚನೆ ಪ್ರಕರಣಕ್ಕೆ ಕಡಿವಾಣ ಹಾಕಲು ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಈ ಸಂಖ್ಯೆ ಎಸ್‌ಎಂಎಸ್ ಮಾಡಬಹುದು.