K-SET Exam: ರಾಜ್ಯ ಸರ್ಕಾರದ ಮಹತ್ವದ ಆದೇಶ : ಇನ್ಮುಂದೆ ‘KEA’ ಮೂಲಕ ನಡೆಯಲಿದೆ ‘K-SET’ ಪರೀಕ್ಷೆ‌ !

Latest news education news From now on 'KEA' will conduct 'K-SET' exam

K-SET Exam: ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ( Karnataka State Assistant Professors Eligibility Test- K-SET) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( Karnataka Examination Authority- KEA) ಮೂಲಕ ನಡೆಸಲು ಆದೇಶ ಹೊರಡಿಸಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ನಡವಳಿಯನ್ನು ಹೊರಡಿಸಿದ್ದಾರೆ.

ನಡವಳಿಯ ಪ್ರಸ್ತಾವನೆಯಲ್ಲಿ 19.12.2019 ರಂದು ನಡೆದ ಸಭೆಯಲ್ಲಿ ಮಾನ್ಯತೆ ಸಮಿತಿಯ ಶಿಫಾರಸ್ಸುಗಳನ್ನು ಆಧರಿಸಿ ಕರ್ನಾಟಕ ರಾಜ್ಯದ ಪರವಾಗಿ 03 KSET ಪರೀಕ್ಷೆಗಳನ್ನು (K-SET Exam) ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆಯನ್ನು ನೀಡಲು ನಿರ್ಧರಿಸಿ, 41 ವಿಷಯಗಳಲ್ಲಿ 14.01.2020 ರಿಂದ 03 ವರ್ಷಗಳವರೆಗೆ (ಪತಿ ವರ್ಷ 01 ಬಾರಿಗೆ) ಕೆ-ಸೆಟ್ ಪರೀಕ್ಷೆಯನ್ನು ನಡೆಸಲು ಮಾನ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಯುಜಿಸಿ ಯಿಂದ ಮಾನ್ಯತೆ ಅಗತ್ಯವಿರುವ ರಾಜ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ಯುಜಿಸಿಯ ಪರಿಕಲ್ಪನೆ ಮತ್ತು ವ್ಯಾಪ್ತಿಯಡಿ ರಾಜ್ಯ ಸರ್ಕಾರವು ಒಂದು ಏಜೆನ್ಸಿಯನ್ನು ಗುರುತಿಸಬಹುದು, ಅದು ವಿಶ್ವವಿದ್ಯಾನಿಲಯವಾಗಿರಬಹುದು ಅಥವಾ ಪ್ರತಿಷ್ಠಿತ ಪರೀಕ್ಷಾ ಸಂಸ್ಥೆ ಅಥವಾ ಉನ್ನತ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರತಿಷ್ಠಿತ ಸಂಸ್ಥೆ ಆಗಿರಬಹುದು. ಈ ಅವಕಾಶದಡಿ 2022ನೇ ಸಾಲನ್ನು ಒಳಗೊಂಡಂತೆ ಮುಂದಿನ ಆದೇಶದವರೆಗೆ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority- KEA) ದ ಮೂಲಕ ನಡೆಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

2022ನೇ ಶೈಕ್ಷಣಿಕ ಸಾಲಿನಲ್ಲಿ ಆಯಾ ರಾಜ್ಯ ಸರ್ಕಾರಗಳು ಗುರುತಿಸಿರುವ ರಾಜ್ಯ ನೋಡಲ್ ಏಜೆನ್ಸಿಗಳಿಗೆ ಯುಜಿಸಿ ಯಿಂದ ಮಾನ್ಯತೆ ಅಗತ್ಯವಿರುವ K-SET ಪರೀಕ್ಷೆಯನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಅನುಮತಿ ನೀಡಿದೆ. ಆದರೆ, ಮೈಸೂರು ವಿಶ್ವವಿದ್ಯಾಲಯದಲ್ಲಿ ಜುಲೈ-2021 ರಲ್ಲಿ ನಡೆದ ಕೆ-ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ. ಹಾಗೂ ಇದಕ್ಕೆ ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷೆಯ ಸಂಯೋಜಕರು ಹಾಗೂ ಇತರರು ಸಂಪೂರ್ಣ ಹೊಣೆಗಾರರು ಎಂದು ದೂರು ಬಂದಿದ್ದರೂ
ಇದರ ಬಗ್ಗೆ ಮೇಲೆ ಓದಲಾದ ಕ್ರಮ ಸಂಖ್ಯೆ: (4)ರ ಆದೇಶದಲ್ಲಿ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ಅವ್ಯವಹಾರಗಳಾದರೆ ಅರ್ಹತೆಯಿರುವ/ಪ್ರತಿಭಾವಂತ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಮತ್ತು ಮುಂದಿನ ಯುವ ಪೀಳಿಗೆಗೆ ಉತ್ತಮ ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದೇ ಹೋಗಬಹುದು. ಹಾಗಾಗಿ ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರಲು ಕೆ-ಸೆಟ್ ಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆ ನಡೆಸುವುದು ಸೂಕ್ತವಾಗಿರುತ್ತದೆ. ಸರ್ಕಾರವು 2021ರಲ್ಲಿ ನಡೆದ ಅವ್ಯವಹಾರಗಳ ಹಿನ್ನೆಲೆಯಲ್ಲಿ, 2022ನೇ ಸಾಲಿನ K-SET ಪರೀಕ್ಷೆಯನ್ನು KEA ಮೂಲಕ ನಡೆಸಲು ತೀರ್ಮಾನಿಸಿ, ಆದೇಶ ಹೊರಡಿಸಿದೆ.

 

 

 

 

ಇದನ್ನು ಓದಿ: Congress: ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಹೇಳಿಕೆ ಒಪ್ಪಿದ ಕಾಂಗ್ರೆಸ್ -ಯಾವ ಹೇಳಿಕೆ, ಏನೆಂದಿತು ಕಾಂಗ್ರೆಸ್ ? 

Leave A Reply

Your email address will not be published.