Shakthi yojana : ಇನ್ನೂ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ? ಶಕ್ತಿ ಯೋಜನೆ ವಿಸ್ತರಣೆ ಬಗ್ಗೆ ಸರ್ಕಾರದ ಸುಳಿವು?
Congress guarantee transport minister Ramalinga Reddy gave important information of extension of Shakti Yojana to private busses
Shakthi yojana: ಕರ್ನಾಟಕ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ಯೋಜನೆ, ಗೃಹಲಕ್ಷ್ಮೀ ಮಹತ್ವಾಕಾಂಕ್ಷೀ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಶಕ್ತಿ ಯೋಜನೆ(Shakthi yojana)ಅಡಿಯಲ್ಲಿ ರಾಜ್ಯದ್ಯಂತ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಈ ಯೋಜನೆ ಕೇವಲ ಸರ್ಕಾರಿ ಬಸ್(Government bus)ಗಳಿಗೆ ಮಾತ್ರ ಸೀಮಿತವಾಗಿದ್ದು, ಸದ್ಯ ಇದನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸುವ ಕುರಿತು ಚಿಂತನೆ ನಡೆದಿದೆ.
ಹೌದು, ಸರ್ಕಾರವು ಮಹಿಳೆಯರಿಗೆ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದಾಗಿಂದ, ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಸಿಡಿದೆದ್ದಿದ್ದವು. ಮಹೆಳೆಯರೆಲ್ಲರೂ ಉಚಿತವೆಂದು ಸರ್ಕಾರಿ ಬಸ್ ಮೊರೆ ಹೋಗುತ್ತಿರುವುದು, ಖಾಸಗಿ ಬಸ್(Praivet bus) ಸಿಬ್ಬಂದಿಗಳಿಗೆ ತುಂಬಾ ನಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಕರೆ ನೀಡಿದೆ. ಸಾರಿಗೆ ಸಂಘಟನೆ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕೂಡ ಬೆಂಬಲ ನೀಡಿದೆ. ಆದರೆ ಈ ಬೆನ್ನಲ್ಲೇ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆಯನ್ನು ವಿಸ್ತರಿಸುವ ಕುರಿತು ಸಾರಿಗೆ ಸಚಿವರು(Travel Minister)ಮಾತನಾಡಿದ್ದಾರೆ.
ಅಂದಹಾಗೆ ಶಕ್ತಿ’ ಯೋಜನೆಯಿಂದ ಆಗಿರುವ ತೊಂದರೆ ಪರಿಹರಿಸುವಂತೆ ಒತ್ತಾಯಿಸಿ ಜು.27 ರಂದು ನಗರದಲ್ಲಿ ಆಟೋರಿಕ್ಷಾ, ಖಾಸಗಿ ಬಸ್, ಓಲಾ- ಊಬರ್, ಮ್ಯಾಕ್ಸಿ ಕ್ಯಾಬ್ಗಳ ಮಾಲೀಕ, ಚಾಲಕರು ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರಿಗೆ ತೊಂದರೆ ಆಗಲಿದೆ.ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋರಿಕ್ಷಾ ಸೇರಿ ಸಾರ್ವ ಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಪರಿಹಾರಕ್ಕೆ ಒತ್ತಾಯಿಸಿ ರಾಯಣ್ಣ ವೃತ್ತದಿಂದ ನಗರದಲ್ಲಿ ಸಾವಿರಾರು ಚಾಲಕರು ಸೇರಿ ರ್ಯಾಲಿ ನಡೆಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಜೆ 7 ಗಂಟೆವರೆಗೆ ಧರಣಿ ನಡೆಸಲು ನಿರ್ಧಾರ ಮಾಡಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳು ಘೋಷಿಸಿದ್ದವು.
ಇದೀಗ ಈ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು(Ramalinga reddy) ‘ಖಾಸಗಿ ಬಸ್ಸುಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಬಗ್ಗೆ ಸಿಎಂ ಜೊತೆ ಸದ್ಯದಲ್ಲೇ ಚರ್ಚೆ ಮಾಡಲಾಗುತ್ತದೆ. ಇಂದು ಮಧ್ಯಾಹ್ನ 3 ಗಂಟೆಗೆ ಖಾಸಗಿ ಸಾರಿಗೆ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಿಗದಿಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Gruhalakshmi Scheme: ಗೃಹಲಕ್ಷ್ಮೀಗೆ ಅರ್ಜಿ ಹಾಕಲು ಬಂತು ಹೊಸ ವಿಧಾನ- SMS ಮಾಡೋದೆ ಬೇಡ, ಜಸ್ಟ್ ಹೀಗ್ ಮಾಡಿದ್ರೆ ಸಾಕು !!