Udupi Case: ಉಡುಪಿ : ಶೌಚಾಲಯದಲ್ಲಿ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಬದಲಾವಣೆ ; ತನಿಖಾಧಿಕಾರಿ ಬದಲಾವಣೆ! ಯಾರು ಗೊತ್ತಾ?

Latest news Udupi Case Investigator change related to filming in the toilet

Udupi Case: ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದ ಎಬ್ಬಿಸುತ್ತಿರುವ ಉಡುಪಿಯ (Udupi Case) ಖಾಸಗಿ ಕಾಲೇಜಿನ (College ) ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದೆ. ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್​​​​​​ಪಿ ಅಕ್ಷಯ್​ ನೇಮಕ ಮಾಡಿದ್ದಾರೆ.

ಉಡುಪಿಯ (Udupi) ಪ್ರಸಿದ್ಧ ಖಾಸಗಿ ನೇತ್ರಜ್ಯೋತಿ ಕಾಲೇಜಿನ
ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿ ಬಳಿಕ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಂಡ ಪ್ರಕರಣದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಯುತ್ತಿದೆ.

ಉಡುಪಿಯಲ್ಲಿ ಬಿಜೆಪಿ ಶಾಸಕರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಹೌದು,
ಆರಂಭದಿಂದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅದರಂತೆಯೇ ಇದೀಗ ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪರಿಗೆ ತನಿಖೆ ವಹಿಸಲಾಗಿದೆ.

ಇನ್ನು ಐಜಿಪಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನು ಮಹಿಳಾ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಆಪರೇಟ್ ಆಗುತ್ತಿದ್ದ ಎಲ್ಲ ಮೊಬೈಲ್​ಗಳ ಕಾಲ್ ಡೀಟೇಲ್ಸ್​​ಗಳನ್ನು ಪತ್ತೆ ಹಚ್ಚಿದ್ದು, ಮೊಬೈಲ್​ಗಳನ್ನು ಎಫ್​ಎಸ್​ಎಲ್​ಗೆ ಕಳುಹಿಸಿದ್ದಾರೆ. ಜೊತೆಗೆ ಅನಗತ್ಯ ವ್ಯಕ್ತಿಗಳು ಕಾಂಪೌಂಡ್ ಆವರಣದಲ್ಲಿ ಓಡಾಟ ಆರೋಪ ಕೇಳಿಬಂದಿದ್ದು, ಕಾಲೇಜು ಆವರಣದಲ್ಲಿನ ಸಿಸಿ ಕ್ಯಾಮರಾಗಳ ಫೂಟೇಜ್​ನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವಿಡಿಯೋ ಮಾಡಿದ್ದ ಮೂವರು ಮುಸ್ಲಿಂ ವಿದ್ಯಾರ್ತಿನಿಯರ ವಿರುದ್ಧ ಎಫ್‌ಐಆರ್‌ ಸಹ ದಾಖಲಾಗಿದ

 

ಇದನ್ನು ಓದಿ: Ranjita: ನಿತ್ಯಾನಂದನ ಕೈಲಾಸದ ಪ್ರಧಾನಿ ನಟಿ ರಂಜಿತಾರಿಂದ ಅಚ್ಚರಿಯ ವೀಡಿಯೋ ಹೇಳಿಕೆ ಬಿಡುಗಡೆ! 

Leave A Reply

Your email address will not be published.