Crop insurance: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ನೊಂದಣಿಗೆ ಆ.7ರವರೆಗೆ ಅವಕಾಶ

Latest national agriculture news Registration of weather based crop insurance scheme is allowed till August 7

 

Crop insurance: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ(Crop insurance) ಯೋಜನೆಯನ್ನು ಜಾರಿಗೊಳಿಸಿದೆ.

ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು.

ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಈ ಯೋಜನೆಯಡಿ ನೋಂದಾಯಿಸಬಹುದು.

ಸಾರ್ವಜನಿಕ ಸೇವಾ ಕೇಂದ್ರದ ಮೂಲಕವೂ ನೋಂದಾಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ 6,400 ರೂ. ಹಾಗೂ 2,350 ರೂ.ಗಳಾಗಿದ್ದು ಆ.7ರೊಳಗೆ ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ದಿನ ಭವಿಷ್ಯ ಹೇಳುತ್ತಿದೆ ಈ ದಿನದ ಶುಭ- ಅಶುಭ ತಾಳ್ಮೆಯಿಂದ ಯೋಚಿಸಿ ಮುನ್ನುಗ್ಗುವ ಚಲ ಒಂದೇ ಪರಿಹಾರ

Comments are closed.