Rationcard New Update: ಇಂಥವರ ರೇಶನ್ ಕಾರ್ಡ್ ರದ್ದಾಗಲು ಕ್ಷಣಗಣನೆ, ಸರ್ಕಾರದಿಂದ ಬಂತು ಹೊಸ ರೂಲ್ಸ್ !
ration card news government new rule ration card cancelled in few days
Rationcard New Update: ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು (Government Schemes) ಕೂಡ ಜನರು ದುರುಪಯೋಗ ಪಡಿಸಿಕೊಳ್ಳುತ್ತಾರೆ. ಏನೇನೋ ಗೋಲ್ ಮಾಲ್ ಮಾಡಿ ಅರ್ಹರಲ್ಲದವರೂ ಕೂಡ ಎಲ್ಲವನ್ನೂ ಪಡೆಯುತ್ತಾರೆ. ಇಂತಹ ಚಟುವಟಿಕೆಗಳು ರೇಷನ್ ಕಾರ್ಡ್ಗಳಲ್ಲಿಯೇ (Ration card) ಹೆಚ್ಚೆನ್ನಹುದು. ಆದರೀಗ ಸರ್ಕಾರ ಇದೆಲ್ಲದಕ್ಕೂ ಕಡಿವಾಣ ಹಾಕಲು ಮುಂದಾಗಿದೆ.
ಹೌದು, ಅನರ್ಹ ಜನರು ಸರ್ಕಾರಕ್ಕೆ (Government) ಗೊತ್ತಿಲ್ಲದಂತೆ ಕಾನೂನನ್ನು ಉಲ್ಲಂಘಿಸಿ ರೇಷನ್ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೆಲವೇ ದಿನಗಳಲ್ಲಿ ಇಂತವರ ರೇಷನ್ ಕಾರ್ಡ್ ರದ್ದಾಗಲಿದೆ. ಹಾಗಾದ್ರೆ ಸರ್ಕಾರದಿಂದ ಬಂದ ಹೊಸ ರೂಲ್ಸ್ (Rules) ಯಾವುದು?
ಸದ್ಯ ಗೃಹಲಕ್ಷ್ಮಿ (Gruha lakshmi) ಯೋಜನೆ ಸೌಲಭ್ಯ ಪಡೆಯಲು ಹೆಚ್ಚಿನ ಸಂಖ್ಯೆಯ ಜನ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಆಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ (BPL Card) ನೀಡುತ್ತಿದೆ. ಬಿಪಿಎಲ್ ಕಾರ್ಡ್ ದಾರರಿಗೆ ರಿಯಾಯಿತಿ ದರದಲ್ಲಿ ಪಡಿತರ ನೀಡಲಾಗುತ್ತದೆ. ಆದರೆ ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ.
ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಅನರ್ಹರಿಗೆ ಸಿಗಬಾರದೆನ್ನುವ ಕಾರಣಕ್ಕೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನುಮುಂದೆ ಇಂತವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ.
ಹೌದು, ಸ್ವಂತ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗುವ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಘೋಷಿಸಿದ್ದಾರೆ. ಹೊಸ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಜೊತೆಗೆ ಇರುವ ಬಿಪಿಎಲ್ ಕಾರ್ಡನ್ನು ರದ್ದು ಮಾಡುವ ಕುರಿತಾಗಿ ತಿಳಿಸಲಾಗಿದೆ. ವೈಟ್ ಬೋರ್ಡ್ ಕಾರನ್ನು ಹೊಂದಿರುವವರ ಕಾರ್ಡನ್ನು ರದ್ದು ಮಾಡಲಾಗುವುದಿಲ್ಲ. ಸ್ವಂತ ಕಾರನ್ನು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು ತಿಳಿದು ಬಂದಿದೆ.
Comments are closed.