ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್!! ಮಾಜಿ ಶಾಸಕರಿಂದ ಗೃಹ ಸಚಿವರಿಗೆ ಮನವಿ

ಮಂಗಳೂರು:ಕಳೆದ ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಟುಕರ ಅಟ್ಟಹಾಸಕ್ಕೆ ಬಲಿಯಾದ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಗೌಡ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ ನೀಡುವ ಬಗ್ಗೆ ಸರ್ಕಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಮಾನ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದ ಬಂಗೇರ, ಈಗಾಗಲೇ ರಾಜ್ಯದಲ್ಲಿ ಸೌಜನ್ಯ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಪೊಲೀಸ್ ಇಲಾಖೆ ರಕ್ಷಣೆಯ ಕೋರಿಕೆಯಾಗಿತ್ತು. ಈ ಹತ್ಯೆಯ ಹಿಂದೆ ಬಂದು ಬಲಾಢ್ಯ ಪ್ರಭಾವಿಗಳು ಇದ್ದು, ಮಹೇಶ್ ಶೆಟ್ಟರ ಜೀವಕ್ಕೆ ರಕ್ಷಣೆ ಬೇಕಾಗಿದೆ. ಅವರ ಜತೆ ಮಹಿಳಾ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದ್ದರಿಂದ ರಕ್ಷಣೆ ನೀಡಬೇಕಿದೆ ಎಂದು ಮಾಜಿ ಶಾಸಕ ವಸಂತ ಬಂಗೇರ ಕೋರಿದ್ದಾರೆ.

ಈ ಬಗ್ಗೆ ಜಿಲ್ಲಾ ಎಸ್ಪಿ ಗುಪ್ತಚರ ಮಾಹಿತಿ ಸಂಗ್ರಹಿಸಿದಾಗ ಯಾವುದೇ ಬೆದರಿಕೆ, ಜೀವಭಯ ಇಲ್ಲದ ಹಿನ್ನೆಲೆಯಲ್ಲಿ ತಿಮರೋಡಿ ನೀಡಿದ್ದ ಮನವಿಗೆ ಸ್ಪಂದನೆ ಸಿಕ್ಕಿರಲಿಲ್ಲ ಎಂದರಲ್ಲದೆ, ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಸಲ್ಲಿಸಿದರು. ಸದ್ಯ ಬಂಗೇರ ಮನವಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಗೃಹ ಸಚಿವರಿಂದ ತಿಮರೋಡಿಗೆ ಗನ್ ಮ್ಯಾನ್ ನೀಡಲು ಪೊಲೀಸ್ ಇಲಾಖೆಗೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಈಗ ತಿಳಿದು ಬಂದಂತೆ ಇಬ್ಬರು ಶಸ್ತ್ರ ಸಜ್ಜಿತ ಗ್ಯಾನ್ ಮ್ಯಾನ್ ಗಳು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ರಕ್ಷಣೆಗೆ ನಿಲ್ಲಲಿದ್ದಾರೆ ಎನ್ನುವ ಮಾಹಿತಿ ಲಭ್ಯ ಆಗಿದೆ. ಕಳೆದ ಸಲ ಕೂಡ, ಘಟನೆಯ ತೀವ್ರತೆಯನ್ನು ಅರಿತು ತಿಮರೋಡಿಗೆ ಸಶಸ್ತ್ರ ಪೋಲೀಸರ ರಕ್ಷಣೆ ನೀಡಲಾಗಿತ್ತು.

Comments are closed.