ಮಂಗಳೂರು: ಭೀಕರ ರಸ್ತೆ ಅಪಘಾತ!! ಬೈಕ್ ಸವಾರ ಸ್ಥಳದಲ್ಲೇ ಮೃತ್ಯು-ಇನ್ನೋರ್ವ ಗಂಭೀರ

Share the Article

 

ಮಂಗಳೂರು: ಬೈಕೊಂದು ಸವಾರನ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆಯು ನಗರದ ಪಂಪ್ ವೆಲ್ ಬಳಿಯಲ್ಲಿ ನಡೆದಿದೆ.

ಅತೀ ವೇಗವಾಗಿ ವಿರುದ್ಧ ದಿಕ್ಕಿನಿಂದ ಬಂದ ಯುವಕರಿದ್ದ ಬೈಕ್ ನಿಯಂತ್ರಣ ಕಳೆದುಕೊಳ್ಳುತ್ತಲೇ ಸ್ಕಿಡ್ ಆಗಿದ್ದು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದು,ಅಪಘಾತದಿಂದ ಮೃತಪಟ್ಟ ಸವಾರ ಹಾಗೂ ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Comments are closed.