Death News: ವರಮಹಾಲಕ್ಷ್ಮೀ ಹಬ್ಬದ ತಯಾರಿಯಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ! ತಾವರೆ ಹೂ ಕೀಳಲೆಂದು ಹೋದ ತಂದೆ-ಮಗ ದಾರುಣ ಸಾವು!!!

Doddaballapur news father and son drowns in Lake who went plucking flower for varalakshmi festival

Doddaballapur: ವರಮಹಾಲಕ್ಷ್ಮೀ ಹಬ್ಬದ ಸಲುವಾಗಿ ದೊಡ್ಡಬಳ್ಳಾಪುರದಲ್ಲಿ( Doddaballapur) ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದಾರುಣವಾಗಿ ಮೃತಪಟ್ಟ (Death News)ಘಟನೆ ವರದಿಯಾಗಿದೆ.

ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬದ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ತಯಾರಿ ನಡೆಯುತ್ತಿದೆ.ವರಮಹಾಲಕ್ಷ್ಮಿ ಹಬ್ಬದ  (varalakshmi festival) ಸಿದ್ಧತೆ ನಡುವೆ ತಂದೆ ಮಗ ಇಬ್ಬರೂ ದುರಂತ ಅಂತ್ಯ ಕಂಡ ಘಟನೆ ವರದಿಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಸಲುವಾಗಿ ತಾವರೆ ಹೂವು ಕೀಳಲು ಹೋಗಿ ತಂದೆ-ಮಗ (Father And Son) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾಗಿರುವ ಪುಟ್ಟರಾಜು(42), ಮಗ ಕೇಶವ(14) ಎಂದು ಗುರುತಿಸಲಾಗಿದೆ.

ವರಮಹಾಲಕ್ಷ್ಮಿ ಹಬ್ವಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಮಾರಾಟ ಮಾಡಲು ಯೋಜನೆ ಹಾಕಿದ್ದರಂತೆ. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಹೋಗಿದ್ದು, ಮೊದಲು ಹೂ ಕೀಳಲು ಮಗ ಕೇಶವ ಕೆರೆಗೆ ಇಳಿದಿದ್ದಾನೆ. ಆದರೆ, ಇದಕ್ಕಿಂದಂತೆ ನೀರಿನಲ್ಲಿ ಮುಳುಗಿದ್ದಾನೆ. ಮಗನ ರಕ್ಷಣೆಯ ಸಲುವಾಗಿ ತಂದೆ ಪುಟ್ಟರಾಜು ನೀರಿಗಿಳಿದಿದ್ದಾರೆ. ಆದರೆ, ದುರದೃಷ್ಟವಶಾತ್ ಇಬ್ಬರೂ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ದುರ್ಘಟನೆ ನಡೆದ ಸ್ವಲ್ಪ ಹೊತ್ತಿನ ಬಳಿಕ ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದ ಸಂದರ್ಭ ದಡದಲ್ಲಿ ಮೊಬೈಲ್ ಮತ್ತು ಚಪ್ಪಲಿ ಪತ್ತೆಯಾಗಿದ್ದು, ಇದರಿಂದ ಅನುಮಾನಗೊಂಡ ವ್ಯಕ್ತಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತಂದೆ-ಮಗನ ಮೃತದೇಹಗಳಿಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Koppal:ಪೊಲೀಸರಿಂದ ಇಸ್ಪೀಟ್‌ ಅಡ್ಡೆ ಮೇಲೆ ಭರ್ಜರಿ ದಾಳಿ! ಅಡಗಿ ಕುಳಿತವರ ಹಿಡಿದ ರೀತಿ ರೋಚಕ!!!

Leave A Reply

Your email address will not be published.