Rain Alert: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಈ ದಿನದವರೆಗೆ ಭಾರೀ ಮಳೆಯಾಗಲಿದೆ ! ಹವಾಮಾನ ಇಲಾಖೆ ಮುನ್ಸೂಚನೆ !!!

Karnataka rain alert very likely to rain occur at many places over coastal Karnataka till September 3

Rain Alert: ಹಲವಾರು ದಿನಗಳಿಂದ ಕರ್ನಾಟಕ (karnataka) ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ (Rain Alert) ನೀಡಿದೆ. ಸದ್ಯ ಕರ್ನಾಟಕದ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ (dakshina Kannada), ಉತ್ತರ ಕನ್ನಡ (Uttara Kannada), ಉಡುಪಿ (Udupi), ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ (bengaluru) ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Petrol-Diesel price: ಸಂಡೆ ಅಂತ ನಿದ್ರೆಗೆ ಜಾರದಿರಿ! ಕೂಡಲೇ ಪೆಟ್ರೋಲ್ – ಡೀಸೆಲ್ ಟ್ಯಾಂಕ್ ಫುಲ್ ಮಾಡಿಸಿ

Leave A Reply

Your email address will not be published.