ಇಂದಿನ ಸೆ. 3 ರ ಸೌಜನ್ಯಾ ಪ್ರತಿಭಟನೆಗೆ ಭಾರೀ ಜನ ಸಾಧ್ಯತೆ ಸರ್ಕಾರಕ್ಕೆ ಮನವರಿಕೆ; ಬೆಳ್ತಂಗಡಿ ಮೂಲಕ ಸಾಗುವ ಎಲ್ಲಾ ವಾಹನಗಳ ರೂಟ್ ಬದಲು

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಬೆಳ್ತಂಗಡಿಯ ತಾಲೂಕು ಆಡಳಿತ ಸೌಧದ ಎದುರು, ಇಂದು, ಸೆ.3 ರಂದು ಬೆಳಗ್ಗಿನಿಂದ ಮಧ್ಯಾಹ್ನ ತನಕ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಸಾಧ್ಯತೆ ದಟ್ಟವಾಗಿದೆ. ಸೌಜನ್ಯ ಹೋರಾಟಕ್ಕೆ ಇಂದು ಬೆಳ್ತಂಗಡಿಗೆ ರಾಜ್ಯದ ದಿಕ್ಕು ದಿಕ್ಕುಗಳಿಂದಲೂ ಜನ ಪ್ರವಾಹವೇ ಹರಿದು ಬರುವ ಸಾಧ್ಯತೆ ಸರ್ಕಾರಕ್ಕೆ ಮನವರಿಕೆ ಆದ ಕಾರಣ, ಬದಲಿ ರಸ್ತೆ ಸಂಚಾರಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ, ಇಂದು ಸೆ.3 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ತನಕ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೌಜನ್ಯ ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೋರಿ ಬೆಳ್ತಂಗಡಿ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ -73 ಮಾರ್ಗದಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಡಾ. ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಏನೆಲ್ಲಾ ಬದಲಾವಣೆ?
ಇಂದು ಸೆ.3ರಂದು ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಕೆಳಗಿನ ಬದಲಾವಣೆಗಳನ್ನು ಮಾಡಲಾಗಿದೆ.
1.ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ ಗಂಟೆ 9ರಿಂದ ಸಂಜೆ 5 ಗಂಟೆವರೆಗೆ ಕೊಯ್ಯೂರು ಕ್ರಾಸ್ ರಸ್ತೆ ಮೂಲಕ ಅದ್ರುಪರಾಲ್ ಮುಖಾಂತರ ಪರಪ್ಪು- ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಮಾರ್ಗ ಬದಲಾವಣೆ
2. ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಅದ್ರುಪೆರಾಲ್ ಮುಖಾಂತರ ಸಂಚರಿಸಲು
3. ಉಳಿದ ಸಣ್ಣ ವಾಹನಗಳನ್ನು ಚರ್ಚ್‌ ಕ್ರಾಸ್‌ನಿಂದ ಕನ್ನಾಜೆ ಪಡ್ಲಾಡಿ ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಇಂದು ಸೆ.3 ರಂದು ಬೆಳಿಗ್ಗೆ 9 ರಿಂದ ಸಂಜೆ 3 ರ ತನಕ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ನಡೆಸಲು ಉದ್ದೇಶಿಸಿರುತ್ತಾರೆ.

ಸಭೆಗೆ ಒಕ್ಕಲಿಗ ಕಾವೂರು ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು, ಒಕ್ಕಲಿಗ ರಾಜ್ಯ ಸಂಘದ ಅಧ್ಯಕ್ಷರು, ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರರು, ಶ್ರೀಮತಿ ಪ್ರಸನ್ನ ರವಿ, ಸಾಮಾಜಿಕ ಹೋರಾಟಗಾರ್ತಿ, ಶ್ರೀಮತಿ ಗೀತಾ, ಮಾನವ ಹಕ್ಕು ಆಯೋಗದ ಕಾರ್ಯದರ್ಶಿ ಹಾಗೂ ಒಡನಾಡಿ ಸಂಸ್ಥೆಯ ಮುಖ್ಯಸ್ಥರು ಮುಂತಾದವರು ಭಾಗವಹಿಸಲಿದ್ದು, ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರದಲ್ಲಿ ಬದಲಾವಣೆ ಕೋರಿ ಬೆಳ್ತಂಗಡಿ ತಹಸಿಲ್ದಾರ್ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಅವಶ್ಯವಿರುವ ಕಡೆ ಸೂಚನ ಫಲಕ:
ಈ ಆದೇಶದ ಅನ್ವಯ ಸದ್ರಿ ರಸ್ತೆಯಲ್ಲಿ ಅವಶ್ಯವಿರುವ ಸೂಚನಾ ಫಲಕ ಅಳವಡಿಸಲು ಹಾಗೂ ಸಂಚಾರ ನಿಯಂತ್ರಣ, ಸಿಬ್ಬಂದಿಗಳನ್ನು ನೇಮಕಗೊಳಿಸಲು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಸೂಚನೆ ನೀಡಿದ್ದಾರೆ. ಒಟ್ಟಾರೆಯಾಗಿ ಬೃಹತ್ ಜನಜಂಗುಳಿ ಬೆಳ್ತಂಗಡಿಗೆ ಪ್ರತಿಭಟನೆಗೆ ಹರಿದು ಬರುವುದು ಸರ್ಕಾರಕ್ಕೆ ಮನವರಿಕೆಯಾಗಿದೆ.

Leave A Reply

Your email address will not be published.