Sullia: ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜತೆ ಅನುಚಿತ ವರ್ತನೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Sullia news Misbehavior with a woman while traveling in a bus case registered in Bellare police station

Share the Article

Sullia : ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ(Sullia).

ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣ (ಟ್ವಿಟರ್) ದಲ್ಲಿ ತಾನು ಪುತ್ತೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ತನ್ನ ಪಕ್ಕದಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿ, ಬಸ್‌ನಿಂದ ಇಳಿಯುವ ವೇಳೆ ಚೀಟಿಯೊಂದರಲ್ಲಿ ಮೊಬೈಲ್ ನಂಬರನ್ನು ಮಹಿಳೆಗೆ ನೀಡಿ ಕರೆ ಮಾಡುವಂತೆ ಕೈ ಸನ್ನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಲಂ : 354A(1)(i) 354(ಡಿ)ಐ.ಪಿ.ಸಿ. ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: Koppa: ಕೊಪ್ಪ ಕಾಡಿನಲ್ಲಿ ಮೂವರು ಮುಸ್ಲಿಂ ಯುವಕರ ಜೊತೆ ಹಿಂದೂ ವಿದ್ಯಾರ್ಥಿನಿ – ಘಟನೆಗೆ ಸಿಕ್ತು ಬಿಗ್ ಟ್ವಿಸ್ಟ್- SP ಹೇಳಿದ್ದೇನು?

Leave A Reply