Home Karnataka State Politics Updates Siddaramaiah-BK Hariprasad: ಪಂಚೆ ಕಟ್ಟಿ, ಒಳಗೆ ಖಾಕಿ ಚಡ್ಡಿ ಹಾಕಿ, ಅರಸು ಕಾರಲ್ಲಿ ಹೋದ್ರೆ ಸಮಾಜವಾದಿ...

Siddaramaiah-BK Hariprasad: ಪಂಚೆ ಕಟ್ಟಿ, ಒಳಗೆ ಖಾಕಿ ಚಡ್ಡಿ ಹಾಕಿ, ಅರಸು ಕಾರಲ್ಲಿ ಹೋದ್ರೆ ಸಮಾಜವಾದಿ ಆಗೋಲ್ಲ – ಸಿದ್ದುಗೆ ಅಸಮಧಾನಿತ ಹರಿಪ್ರಸಾದ್ ಗುದ್ದು !! ಅಚ್ಚರಿಯ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

Siddaramaiah-Hariprasad
Image source - public tv

Hindu neighbor gifts plot of land

Hindu neighbour gifts land to Muslim journalist

Siddaramaiah-Hariprasad: ರಾಜ್ಯ ಕಾಂಗ್ರೆಸ್(State Congress) ನಲ್ಲಿ ಅಸಮಾಧಾನ ಸ್ಪೋಟಗೊಳ್ಳುತ್ತಿದ್ದು, ಇಷ್ಟು ದಿನ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್(BK hariprasad), ಇದೀಗ ನೇರಾನೇರ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ(Siddaramaiah) ಜಾತಿ ರಾಜಕಾರಣ ಮಾಡುತ್ತಿದ್ದಾರೆ, ಪಂಚೆ ಉಟ್ಟು, ಖಾಕಿ ಚಡ್ಡಿ ಹಾಕಿದ್ರೆ ಸಮಾಜವಾದಿ ಆಗಲ್ಲ ಎಂದು ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ(Siddaramaiah-Hariprasad).

ಹೌದು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತನ್ನನ್ನು ಮಂತ್ರಿ ಮಾಡಲಿಲ್ಲ ಎಂದು ಸದಾ ಸಿದ್ದರಾಮಯ್ಯನ ವಿರುದ್ಧ ಕಿಡಿ ಕಾರುತ್ತಿರುವ ವಿದಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಹೆಸರು ಹೇಳದೆಯೇ ಭಾಷಣದುದ್ದಕ್ಕೂ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ ಹರಿಪ್ರಸಾದರು ಪಂಚೆ ಹಾಕಿಕೊಂಡು ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದು ಬಹಳ ಮಾರ್ಮಿಕವಾಗಿಯೇ ಸಿದ್ದರಾಮಯ್ಯನನ್ನು ತಿವಿದರು.

ಅಂದಹಾಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಈಡಿಗ ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯು ಹರಿಪ್ರಸಾದ್‌ ಅವರ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯಿತು. ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ. ನಾನು ಮೂರು ಸಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಅಲ್ಲದೆ ನನಗೆ ಅಧಿಕಾರ ಸಿಕ್ಕಿದೆ. ಇಷ್ಟ ಬಂದ ಹಾಗೇ ಮಾಡ್ತೀನಿ ಅಂದ್ರೆ ಜನ ತೀರ್ಮಾನ ಮಾಡುತ್ತಾರೆ. ಮಾತು ಮಾತಿಗೆ ದೇವರಾಜ ಅರಸು ಎಂದು ಹೇಳಿದರೆ ಆಗುವುದಿಲ್ಲ. ಅರಸು ಅವರ ಕಾರಿನಲ್ಲಿ ಕುಳಿತ ಮಾತ್ರಕ್ಕೆ ಅರಸು ಆಗಲು ಸಾಧ್ಯವಿಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದರ ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರೇಳದೆ ಟಾಂಗ್ ಕೊಟ್ಟರು. ಜೊತೆಗೆ ಅರಸು ಅವರ ರೀತಿ ಸಣ್ಣ ಸಮುದಾಯಗಳ ಕೈ ಹಿಡಿಯುವ ಕೆಲಸ ಮಾಡಬೇಕು. ಅರಸು ಅವರ ಚಿಂತನೆಗಳನ್ನು, ವಿಚಾರಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇನ್ನು ಗೃಹ ಸಚಿವ ಪರಮೇಶ್ವರ್ ಕುರಿತು ಮಾತನಾಡಿದ ಅವರು ರಾಜ್ಯದಲ್ಲಿ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸಮಯ ಅಧ್ಯಕ್ಷರಾಗಿದ್ದರು. ಅವರನ್ನು ಮುಖ್ಯಂತ್ರಿ ಮಾಡುವುದಕ್ಕೆ ಎಲ್ಲ ರೀತಿಯ ಅರ್ಹತೆ ಇದ್ದವರು. ಅವರನ್ನು ಸಿಎಂ ಇರಲಿ, ಡಿಸಿಎಂ ಸ್ಥಾನದಿಂದ ಡಿಪ್ರಮೋಟ್ ಮಾಡಲಾಯ್ತು. ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ. ಈಗಲೂ ಉಪಮುಖ್ಯಮಂತ್ರಿ ಮಾಡುವಾಗ ದಲಿತರನ್ನು ಮಾಡಬಹುದಿತ್ತು. ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಮಾಡಬಹುದಿತ್ತು. ಅಲ್ಪಸಂಖ್ಯಾತರನ್ನ ಡಿಸಿಎಂ ಮಾಡಬಹುದಿತ್ತು, ಆದರೆ ಮಾಡಲಿಲ್ಲ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಏನಂದ್ರು?
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರಿಪ್ರಸಾದ್ ನನ್ನ ಹೆಸರು ಹೇಳಿದ್ದಾರಾ? ಹೆಸರು ಹೇಳಿಲ್ಲ, ಅದಕ್ಕೆ ನಾನು ಪ್ರತಿಕ್ರಿಯಿಸಲ್ಲ. ಜನರಲ್ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.
ಅಲ್ಲದೆ ಗೃಹ ಸಚಿವ ಪರಮೇಶ್ವರ್ ಮಾತನಾಡಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ, ನನ್ನ ಮೇಲೆ ಅಭಿಮಾನದಲ್ಲಿ ಅವರು ಹೀಗೆ ಹೇಳಿದ್ದಾರೆ. ಅಂತಿಮವಾಗಿ ಸಿಎಂ, ಡಿಸಿಎಂನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದ ಹೇಳಿದ್ದಾರೆ.

ಇದನ್ನೂ ಓದಿ: Kodi mutt shri: ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಸರ್ಕಾರದ ಕುರಿತು ಸ್ಪೋಟಕ ಭವಿಷ್ಯ ನುಡಿದ ಕೋಡಿ ಶ್ರೀ !! ಭಾರೀ ಅಚ್ಚರಿ ಮೂಡಿಸಿದ ಸ್ವಾಮಿಜಿಗಳ ಹೇಳಿಕೆ