B S Yediyurappa : BJP-JDS ಮೈತ್ರಿ ಬಗ್ಗೆ ಏಕಾಏಕಿ ಯೂಟರ್ನ್ ಹೊಡೆದ ಯಡಿಯೂರಪ್ಪ !! ಮೈತ್ರಿ ಅಧಿಕೃತ ಘೋಷಣೆ ಮಾಡಿದ BSY ಈಗ ಹೀಗೆ ಹೇಳಿದ್ಯಾಕೆ ??

Political news former CM BS Yeddyurappa changes stance says no deal with jds yet

B S Yediyurappa: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯದ ಪ್ರಭಾವಿ ನಾಯಕ ಬಿಎಸ್ ಯಡಿಯೂರಪ್ಪನವರು(B S Yediyurappa) ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಹಬ್ಬಿದ ಸುದ್ದಿಗಳಿಗೆ ಹೊಸ ಸುದ್ದಿ ಬೆರೆಸಿದ್ದಾರೆ. ಬಿಎಸ್ ಯಡಿಯೂರಪ್ಪನವರು ಏಕಾಏಕಿ ನ್ಯೂ ಟರ್ನ್ ತೆಗೆದು. ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇನ್ನೇನು ತಾಳಿ ಮದುವೆ ಮಂಟಪದಲ್ಲಿ ತಾಳಿ ಕಟ್ಟಿಕೊಳ್ಳಬೇಕು, ಅಷ್ಟರಲ್ಲಿ ಮದುವೆಯ ಬಗ್ಗೆ ಗಂಡು ಅಪಸ್ವರ ಎದ್ದ ಹಾಗಾಗಿದೆ. (ನಿನ್ನೆ ತಾನೇ JDS ನ ಹುಡುಗಿ ಚೆನ್ನಾಗಿದೆ, ಅದಕ್ಕಾಗಿ BJP ಹಿಂದೆ ಹಿಂದೆ ಬರೋದು ಸಹಜ ಎಂದಿದ್ದರು ಸಿಎಂ ಇಬ್ರಾಹಿಂ)

‘ಜೆಡಿಎಸ್ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ’ ಎಂದು ಖುದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ತಮ್ಮ ಹೇಳಿಕೆಯಿಂದ ದಿಡೀರ್ ಯೂ ಕಟ್ ಹೊಡೆದಿರುವ ಅವರು, ಸದ್ಯಕ್ಕೆ ಅಂತಹಾ ಮೈತ್ರಿ ಕುರಿತು ಯಾವುದೇ ನಿರ್ಧಾರ ಬಂದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದಾರೆ.

ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಪ್ರಧಾನಿ ನರೇಂದ್ರ ಮೋದಿ ಬೇರೆ ವಿಷಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಬಗ್ಗೆ ಬಹುಶಃ ನಾಳೆ ಅಥವಾ ನಾಳಿನ ಮಾತುಕತೆ ಆಗಬಹುದು. ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ. ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ; ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ’ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ JDS ಬಿಜೆಪಿಯ B ಟೀಂ ಎನ್ನುವುದು ನಿಜವಾಯ್ತು ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾತನಾಡಿದ ಯಡಿಯೂರಪ್ಪ, ‘ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನಾನು ಮಾತಾಡಲು ಹೋಗಲ್ಲ. ಅಮಿತ್ ಶಾ ಜೊತೆ ನಾನು ಇನ್ನೂ ಮಾತಾಡಿಲ್ಲ ಎಂದಿದ್ದಾರೆ’.

ಇದನ್ನೂ ಓದಿ: H D Kumaraswamy: ಮೈತ್ರಿ ಬೆನ್ನಲ್ಲೇ ಬಿಜೆಪಿ ಕುರಿತು ಸ್ಪೋಟಕ ಹೇಳಿಕೆ ನೀಡಿದ ಎಚ್, ಡಿ ಕುಮಾರಸ್ವಾಮಿ !! ಭಾರೀ ಕುತೂಹಲ ದಳಪತಿ ನಡೆ

Leave A Reply

Your email address will not be published.