ಖಾಸಗಿ ವಾಹನ ಮಾಲಿಕರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ- ಬೆಂಗಳೂರು ಬಂದ್ ನಡುವೆಯೂ ಸಂಘಟನೆಗಳಿಗೆ ಬಿಗ್ ಶಾಕ್

Bengaluru news political news CM Siddaramaiah react about Bengaluru bandh

Share the Article

Siddaramaiah: ಈಗಾಗಲೇ ಖಾಸಗಿ ಬಸ್, ಆಟೋ, ಕ್ಯಾಬ್, ಸೇರಿದಂತೆ ಸಾವಿರಾರು ಖಾಸಗಿ ವಾಹನಗಳು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಯ ನಂತರ ಬಹಳ ನಷ್ಟವನ್ನು ಅನುಭವಿಸಿದೆ. ಆದ್ದರಿಂದ ಶಕ್ತಿ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ನಡೆಸಲಾಗುತ್ತಿದೆ.

ಈ ಖಾಸಗಿ ವಾಹನಗಳಾದ ಆಟೋ, ಕ್ಯಾಬ್ ಗಳ ಬಂದ್ ನಿಂದಾಗಿ, ಸಾವಿರಾರು ಖಾಸಗಿ ವಾಹನಗಳು ರಸ್ತೆಗೆ ಇಳಿದಿಲ್ಲ. ಇದರಿಂದಾಗಿ ಕೆಲವೆಡೆ ಪ್ರಯಾಣಿಕರು ಪರದಾಡುವಂತಾಯಿತು.

ಸದ್ಯ ಈ ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) , ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ ಬಸ್ ನವರು ನಷ್ಟ ಎನ್ನುತ್ತಿದ್ದಾರೆ. ಅಲ್ಲದೇ ಆ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಆದರೆ ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ. ಯಾಕೆಂದರೆ ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನ ಪ್ರಕಾರ ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ, ಯಾವುದೇ ತೊಂದರೆಯಾಗದೆ ಶಾಂತಯುತವಾಗಿ ಪ್ರತಿಭಟನೆ ಮಾಡಲಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ನೀಲಿ ಹಕ್ಕಿ’ ಬಿಟ್ಟ ಎಲಾನ್‌ ಮಸ್ಕ್‌ಗೆ ಭಾರತದ ಈ ‘ನೀಲಿ’ ಹುಡುಗಿಯೇ ಸೀಕ್ರೆಟ್ ಗರ್ಲ್‌ಫ್ರೆಂಡ್ !! ಇಷ್ಟೇ ಅಲ್ಲಾ… ಇನ್ನೂ ಏನೇನೋ ಇದೆ ‘ಆ ಟೈಪ್’ ಸೀಕ್ರೆಟ್

Leave A Reply