ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಆದೇಶ ನಮಗೆ ಬಂದಿಲ್ಲ, ಇದು ಗಾಳಿ ಸುದ್ದಿ- ದ.ಕ.ಎಸ್ಪಿ ಸ್ಪಷ್ಟನೆ

 

ಮಂಗಳೂರು : ಉಜಿರೆಯಲ್ಲಿ ನಡೆದ ಭಾಸ್ಕರ ನಾಯ್ಕ ಎಂಬರವ ಮೇಲೆ ನಡೆದ ಹಲ್ಲೆ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶಿಸಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ‘ಆ ರೀತಿಯ ಯಾವುದೇ ಆದೇಶ ನಮಗೆ ಬಂದಿಲ್ಲ. ಹೈಕೋರ್ಟ್‌ ಆದೇಶ ನೀಡಿದೆ ಎಂಬುದು ಗಾಳಿ ಸುದ್ದಿ’ ಎಂದು ಹೇಳಿದ್ದಾರೆ.

Leave A Reply

Your email address will not be published.