Home latest Araga Jnanendra: ಚೈತ್ರಾ ಕುಂದಾಪುರ ಪ್ರಕರಣ- ದುರುದ್ದೇಶದಿಂದ ಹಿಂದೂ ಕಾರ್ಯಕರ್ತರನ್ನು ಬಂದಿಸಿದರೆ ಉಗ್ರ ಹೋರಾಟ ಮಾಡುತ್ತೇವೆ...

Araga Jnanendra: ಚೈತ್ರಾ ಕುಂದಾಪುರ ಪ್ರಕರಣ- ದುರುದ್ದೇಶದಿಂದ ಹಿಂದೂ ಕಾರ್ಯಕರ್ತರನ್ನು ಬಂದಿಸಿದರೆ ಉಗ್ರ ಹೋರಾಟ ಮಾಡುತ್ತೇವೆ !! ಅಚ್ಚರಿ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ !

Hindu neighbor gifts plot of land

Hindu neighbour gifts land to Muslim journalist

Araga Jnanendra: ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರ ಕುಂದಾಪುರ ಅವರನ್ನು ಬಂಧಿಸಿರುವ ವಿಚಾರ ತಿಳಿದಿರುವಂತದ್ದೇ. ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ವಂಚಿಸಿದ ಆರೋಪದ ಹಿನ್ನೆಲೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಇದೀಗ ಚೈತ್ರಾ ಕುಂದಾಪುರ (chaithra kundapura)ಪ್ರಕರಣದ ಕುರಿತು ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು, ದುರುದ್ದೇಶದಿಂದ ಹಿಂದೂ ಕಾರ್ಯಕರ್ತರನ್ನು ಬಂದಿಸಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಭಾರೀ ವೈರಲ್ ಆಗಿದೆ.

ಶಿವಮೊಗ್ಗದಲ್ಲಿ ಚೈತ್ರಾ ಕುಂದಾಪುರ ಬಂಧನ ವಿಷಯವಾಗಿ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಅವರು, ಚೈತ್ರಾ ಕುಂದಾಪುರ ಅವರು ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಕಾನೂನು ಕ್ರಮ ಆಗಲಿ. ಆದರೆ ಅನಾವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.