Home Karnataka State Politics Updates Basavaraj bommai: ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ-ಮಂಗಳೂರಿನಲ್ಲಿ ಬೊಮ್ಮಾಯಿ

Basavaraj bommai: ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ-ಮಂಗಳೂರಿನಲ್ಲಿ ಬೊಮ್ಮಾಯಿ

Basavaraj bommai
Image source: varth Bharati

Hindu neighbor gifts plot of land

Hindu neighbour gifts land to Muslim journalist

Basavaraj bommai: ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj bommai ) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧವಿಲ್ಲ. ತನಿಖೆ ಆಗಿ ಸತ್ಯ ಹೊರ ಬರಲಿ ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತಾಗಿ ಮಾತನಾಡಿದ ಅವರು, ಇದುವರೆಗೂ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ. ಬರುವ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನು ಮಾತನಾಡಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷ ಒಂದಾಗಿ ಹೆಚ್ಚು ಸೀಟು ಪಡೆಯುವುದು ಉದ್ದೇಶ ಎಂದರು.

ಇದನ್ನೂ ಓದಿ: 2000 ರೂ. ನೋಟು ಇನ್ನು ಐದು ದಿನದಲ್ಲಿ ಇಲ್ಲಿ ಕೆಲಸ ಮಾಡುವುದಿಲ್ಲ; ಕಾರಣ ಇಲ್ಲಿದೆ!!!