BPL ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್! ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ!! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!!!
ಮುಂಗಾರು ಮಳೆ ಎಲ್ಲಾ ಕಡೆ ಕಡಿಮೆಯಾದ ಕಾರಣ ರಾಜ್ಯದಲ್ಲಿ 150ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಣೆ ಮಾಡಿದೆ. ಮಳೆ ಕೈಕೊಟ್ಟ ಕಾರಣ, ಇದೀಗ ಈ ಘೋಷಣೆಯ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ವಿತರಣೆ ಮಾಡುವ ಕುರಿತು ಚಿಂತನೆಯೊಂದು ನಡೆದಿದೆ.
ನಗದು ನೀಡುವ ಬದಲಿಗೆ ಬರಪೀಡಿತ ತಾಲೂಕುಗಳಿಗೆ ತಲಾ ಐದು ಕೆಜಿ ಅಕ್ಕಿ ವಿತರಿಸಲು ಚಿಂತನೆ ನಡೆದಿದೆ. ಈ ಕುರಿತು ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದರು.
ಎಲ್ಲಾ ಬಿಪಿಎಲ್ ಪಡಿತರ ಕಾರ್ಡ್‌ದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ವಿತರಿಸಲು ಮಾಸಿಕ 2.29 ಲಕ್ಷ ಟನ್ ಅಕ್ಕಿ ಬೇಕಾಗುತ್ತದೆ. ಹಣದ ಬದಲು ಅಕ್ಕಿ ಪೂರೈಕೆಯ ಚಿಂತನೆ ನಡೆದಿದೆ. ಅಕ್ಕಿ ಖರೀದಿ ಮಾಡಲು ಆಂಧ್ರ ಮತ್ತು ತೆಲಂಗಾಣ ಸರಕಾರಗಳೊಂದಿಗೆ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪ ಸಲ್ಲಿಸಿ ಒಪ್ಪಿಗೆ ಪಡೆದ ನಂತರ ಈ ಕುರಿತು ತೀರ್ಮಾನ ಮಾಡಲಾಗುವುದು ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ.