Plastic bottels ban: ಪ್ಲಾಸ್ಟಿಕ್ ನೀರಿನ ಬಾಟ್ಲಿ ಕುರಿತು ಬಂತು ಹೊಸ ರೂಲ್ಸ್- ರಾತ್ರೋ ರಾತ್ರಿ ಹೊಸ ಆದೇಶ ಹೊರಡಿಸಿದ ಸರ್ಕಾರ
Karnataka news complete ban on plastic bottles in government offices meetings and functions state government order
Plastic bottels ban: ನಾವು ಯಾವುದೇ ಸಭೆ ಸಮಾರಂಭಗಳಿಗೆ, ಮದುವೆ – ಮುಂಜಿಗಳಿಗೆ ಹೋದಂತಹ ಸಂದರ್ಭದಲ್ಲಿ ಕುಡಿಯಲು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು(Plastic water botel)ಇಟ್ಟಿರುತ್ತಾರೆಹ ಇದು ಏಲ್ಲಾ ಕಡೆ ನಡೆಯದಿದ್ದರೂ ಹೆಚ್ಚಿನ ಕಡೆಗಳಲ್ಲಿ ಇದ್ದೇ ಇದೆ. ಹೀಗಾಗಿ ಎಲ್ಲಿನೋಡಿದರೂ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಪರಿಸರಕ್ಕೂ ಹೆಚ್ಚಿನ ದುಷ್ಪರಿಣಾಮ ಬೀರುತ್ತದೆ. ಆದರೆ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ಹೌದು, ಈ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ನಿಯಂತ್ರಿಸುವ(Plastic bottels ban) ನಿಟ್ಟಿನಲ್ಲಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರಕಾರ ರಾಜ್ಯದೆಲ್ಲಡೆ ಇನ್ಮುಂದೆ ನಡೆಯಲಿರುವ ಸರಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆಯನ್ನು ನಿಷೇಧಿಸಿ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ಹೊರಡಿಸಿದ್ದು, ಸರ್ಕಾರದ ಆದೇಶದಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿದೆ.
ಆದೇಶದಲ್ಲಿ ಏನಿದೆ?
ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು. ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಎಂದು ಹೇಳಿದ್ದಾರೆ.
ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಪುನರುಚ್ಚರಿಸುತ್ತ ಇನ್ನುಮುಂದೆ ಎಲ್ಲಾ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸಬೇಕು. ನಿಗಧಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವಂತೆ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.
ಪರ್ಯಾಯ ಮಾರ್ಗಗಳು :
ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆದ್ದರಿಂದ, ದೊಡ್ಡ ಸರ್ಕಾರಿ ಕಚೇರಿಯಾದರೆ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಬೇಕಾಗುತ್ತದೆ. ಸಭೆ, ಸಮಾರಂಭಗಳು ಇದ್ದಾಗ 20 ಲೀಟರ್ ಕ್ಯಾನ್‌ನಲ್ಲಿ ಕುಡಿಯುವ ನೀರು ತರಿಸಬೇಕು. ಸ್ಟೀಲ್, ಪೇಪರ್ ಅಥವ ಗಾಜಿನ ಲೋಟದ ಮೂಲಕ ಅವುಗಳನ್ನು ಸರಬರಾಜು ಮಾಡಬಹುದಾಗಿದೆ.