Yatindra Siddaramaiah: ಸಿಎಂ ಸಿದ್ದುಗೆ ಕಂಟಕವಾದ ಪುತ್ರ ಯತೀಂದ್ರ !! ಅದೊಂದು ಗುಟ್ಟು ರಟ್ಟು ಮಾಡಿ ತಪ್ಪು ಮಾಡಿಬಿಟ್ರಾ?

BJP plan complaint to election commission against Siddaramaiah on yatindra gift statement

Yatindra Siddaramaiah: ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆಗೆ ಇಸ್ತ್ರಿಪೆಟ್ಟಿಗೆ ಹಂಚಿಕೆ ಮಾಡಿದ ಹಿನ್ನೆಲೆ ಸಿದ್ದರಾಮಯ್ಯ(Siddaramaiah) ಗೆಲುವು ಪಡೆದಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (yatindra Siddaramaiah) ಅವರ ಹೇಳಿಕೆ ಭಾರೀ ಸಂಚಲನ ಸೃಷ್ಟಿ ಮಾಡಿದೆ.

 

ನಂಜನಗೂಡಿನಲ್ಲಿ ಶುಕ್ರವಾರ ನಡೆದ ‌ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪುತ್ರ ನೀಡಿರುವ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆಯಲ್ಲಿ ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿದೆ. ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಯತೀಂದ್ರ ಅವರ ಹೇಳಿಕೆಯ ಬೆನ್ನಲ್ಲೇ ಮಗನ ಹೇಳಿಕೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುತ್ತು ಉಂಟು ಮಾಡುತ್ತಾ ಎಂಬ ಪ್ರಶ್ನೆಗಳು ಭುಗಿಲೆದ್ದಿದೆ. ಇದೀಗ, ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ಅಸ್ತ್ರವಾಗಿ ಬಳಕೆ ಮಾಡಿಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲು ತೀರ್ಮಾನ ಮಾಡಿದೆ.

ಚುನಾವಣಾ ವೇಳೆ ಮತದಾರರಿಗೆ ಹಣ, ಮದ್ಯ, ಉಡುಗೊರೆ ನೀಡುವಂತಿಲ್ಲ. ಒಂದು ವೇಳೆ ಉಡುಗೊರೆ ನೀಡಿದ್ದು ಬಹಿರಂಗ ವಾದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಲು ಮುಂದಾಗಿದೆ. ಈ ನಡುವೆ, ಯತೀಂದ್ರ ಅವರ ಹೇಳಿಕೆಯನ್ನು ಚುನಾವಣಾ ಆಯೋಗ ಗಮನಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಅರ್ಜಿ ವಿಚಾರಣೆ ಬಾಕಿ ಉಳಿದಿದ್ದು, ಯತೀಂದ್ರ ಅವರ ಹೇಳಿಕೆಯನ್ನು ಸಾಬೀತು ಮಾಡಲು ಪೂರಕ ಸಾಕ್ಷಿಯಿದ್ದಲ್ಲಿ, ಇಸಿಐ ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ತಮ್ಮ ಹೇಳಿಕೆ ವೈರಲ್ ಆಗುತ್ತಿದ್ದಂತೆಯೇ ಅಲರ್ಟ್ ಆಗಿರುವ ಯತೀಂದ್ರ ಸಿದ್ದರಾಮಯ್ಯನವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ವರುಣಾ ಕ್ಷೇತ್ರದ ಜಿಲ್ಲಾ ಸಮಾವೇಶದ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಪದಾಧಿಕಾರಿಗಳು ಉಡುಗೊರೆಗಳನ್ನು ವಿತರಣೆ ಮಾಡಲಾಗಿದೆ. ಪಕ್ಷದಿಂದ ಇಲ್ಲವೇ ನಮ್ಮ ಕಡೆಯಿಂದ ಉಡುಗೊರೆ ನೀಡಿಲ್ಲ. ಈ ವೇಳೆ ನಮ್ಮ ತಂದೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ತೀರ್ಮಾನ ಮಾಡಲಾಗಿದೆ. ನನಗೆ ಸಾಧ್ಯವಾಗದ ಹಿನ್ನೆಲೆ ನನ್ನ ತಂದೆ ಸಮಾವೇಶಕ್ಕೆ ಹಾಜರಿದ್ದರು ಎಂದು ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದುಗೆ ಕಂಟಕವಾದ ಪುತ್ರ ಯತೀಂದ್ರ !! ಅದೊಂದು ಗುಟ್ಟು ರಟ್ಟು ಮಾಡಿ ತಪ್ಪು ಮಾಡಿಬಿಟ್ರಾ?

Leave A Reply

Your email address will not be published.