Dengue Fever: ಜನರೇ ಮಹತ್ವದ ಮಾಹಿತಿ! ಹೆಚ್ಚಿದ ಡೆಂಗ್ಯೂ ಪ್ರಕರಣ; ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್ ಬಿಡುಗಡೆ!!!
Health news dengue cases increased in Karnataka health department issues guidelines
Dengue fever: ರಾಜ್ಯದಲ್ಲಿ ನಿರಂತರ ಡೆಂಗ್ಯೂ(Dengue fever) ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ರಾಜ್ಯ ಆರೋಗ್ಯ ಇಲಾಖೆ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಅನುಸಾರ ಡೆಂಗ್ಯೂ ಈಡಿಸ್ ಎಂಬ ಸೊಳ್ಳೆ ಕಚ್ಚುವ ಮೂಲಕ ಕಂಡುಬರುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ತಗುಲುವುದಲ್ಲದೆ ಸಾಮಾನ್ಯವಾಗಿ ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಡೆಂಗ್ಯೂಗೆ ಸರಿಯಾದ ಔಷಧಿ ಇಲ್ಲವಾದರೂ ರೋಗಲಕ್ಷಣಗಳನ್ನು ಗಮನಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಕೇಂದ್ರದ ಮಾರ್ಗಸೂಚಿ ಅನುಸಾರ, ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಖೆ(Karnataka Health Department) ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ಡೆಂಗ್ಯೂ ರೋಗ ಲಕ್ಷಣಗಳು ಹೀಗಿವೆ:
ವಿಪರೀತ ಜ್ವರ, ಕಣ್ಣು, ಕಿವಿ, ತಲೆ ನೋವು ಕಾಣಿಸಿಕೊಳ್ಳುತ್ತದೆ. ವಾಂತಿ, ತೀವ್ರ ಹೊಟ್ಟೆ ನೋವು, ಬಾಯಿ, ಮೂಗು ಮತ್ತು ಒಸಡುಗಳಲ್ಲಿ ಕೆಂಪು ತೇಪೆಗಳು ಕಂಡುಬರುತ್ತದೆ. ಕಡಿಮೆ ರಕ್ತದೊತ್ತಡ ಕಂಡು ಬರುತ್ತದೆ.
ಡೆಂಗ್ಯೂ ತಡೆಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ?
# ಮನೆಗಳ ಸುತ್ತಮುತ್ತಲಿನ ತ್ಯಾಜ್ಯ ಟಿನ್‌ಗಳು, ಟೈರ್‌ಗಳು ಮತ್ತು ಬಾಟಲಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಜಾಗ್ರತೆ ವಹಿಸಬೇಕು.
# ಡೆಂಗ್ಯೂ ಇರುವವರು ಸಾಕಷ್ಟು ನೀರಿನ ಅಂಶ ಇರುವಂತಹ ಪದಾರ್ಥಗಳನ್ನು ಸೇವಿಸುವ ಜೊತೆಗೆ ಹೆಚ್ಚಿನ ವಿಶ್ರಾಂತಿ ಪಡೆಯಬೇಕು.
# ಹಗಲಿನಲ್ಲಿ ಮಲಗುವ / ವಿಶ್ರಾಂತಿ ಪಡೆಯುವ ಸಂದರ್ಭ ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ಸೊಳ್ಳೆ ಪರದೆಯನ್ನು ಬಳಕೆ ಮಾಡುವುದು ಉತ್ತಮ.
# ಕೈ ಮತ್ತು ಕಾಲುಗಳನ್ನು ಮುಚ್ಚುವ ಪೂರ್ಣ ಉಡುಪುಗಳನ್ನು ಧರಿಸಬೇಕು.
# ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆಗಳನ್ನು ಅಳವಡಿಸಬೇಕು.
#’ ಮೇಲ್ಛಾವಣಿಯ ಟ್ಯಾಂಕ್‌ಗಳು ಸೇರಿದಂತೆ ಎಲ್ಲಾ ನೀರಿನ ಪಾತ್ರೆಗಳನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡುತ್ತಿರಬೇಕು. ಎಲ್ಲ ನೀರಿನ ತೊಟ್ಟಿಗಳನ್ನು ಚೆನ್ನಾಗಿ ತೊಳೆದು, ಒಣಗಿಸಿ ಬಳಕೆ ಮಾಡಬೇಕು.
# ಏರ್ ಕೂಲರ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆಯಾದರೂ ಬದಲಾಯಿಸಬೇಕು.
ಇದನ್ನೂ ಓದಿ: Post Office Scheme: ಪೋಸ್ಟ್ ಆಫೀಸ್ ನ ಈ ಯೋಜನೆಯಲ್ಲಿ 2000 ರೂ. ಹೂಡಿಕೆ ಮಾಡಿ- ಶೀಘ್ರದಲ್ಲಿ 1,20,000 ರೂ. ಪಡೆಯಿರಿ