Yatindra Siddaramaiah : ಸಿದ್ದು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಪ್ರಕರಣ- ತಕ್ಕ ಉತ್ತರ ಕೊಟ್ಟು ಎಲ್ಲರ ಬಾಯಿ ಮುಚ್ಚಿದ ಯತೀಂದ್ರ ಸಿದ್ದರಾಮಯ್ಯ!

Political news yatindra Siddaramaiah gives clarification about his gift statement

Share the Article

Yatindra Siddaramaiah: ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆಗೆ ಇಸ್ತ್ರಿಪೆಟ್ಟಿಗೆ ಹಂಚಿಕೆ ಮಾಡಿದ ಹಿನ್ನೆಲೆ ಸಿದ್ದರಾಮಯ್ಯ(Siddaramaiah) ಗೆಲುವು ಪಡೆದಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (Yatindra Siddaramaiah) ಅವರ ಹೇಳಿಕೆ ಭಾರೀ ಸಂಚಲನ ಸೃಷ್ಟಿ ಮಾಡಿತ್ತು.

ವಿಧಾನಸಭಾ ಚುನಾವಣೆಗೂ (Karnataka Assembly Elections 2023) ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ(yathindra siddaramaiah) ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ವೇಳೆ ಮತದಾರರಿಗೆ ಹಣ, ಮದ್ಯ, ಉಡುಗೊರೆ ನೀಡುವಂತಿಲ್ಲ. ಒಂದು ವೇಳೆ ಉಡುಗೊರೆ ನೀಡಿದ್ದು ಬಹಿರಂಗವಾದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದ್ದು ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ವಿಡಿಯೋ ವೈರಲ್ ಆಗಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕುಕ್ಕರ್, ಐರಾನ್ ಬಾಕ್ಸ್ ಯಾವಾಗ ಹಂಚಿಕೆ ಮಾಡಲಾಗಿದೆ. ಏಕೆ ಹಂಚಿಕೆ ಮಾಡಲಾಗಿದೆ ಎಂಬ ಬಗ್ಗೆ ವಿವರಣೆ ನೀಡಿ ಸ್ಪಷ್ಟನೆ ನೀಡಿದ್ದಾರೆ.

ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ಕುಕ್ಕರ್, ಐರನ್ ಬಾಕ್ಸ್ ಹಂಚಲಾಗಿದೆ. ಆದರೆ ಮಾಧ್ಯಮದಲ್ಲಿ ಚುನಾವಣೆಯ ನಿಟ್ಟಿನಲ್ಲಿ ಇವುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬರುತ್ತಿದೆ. ಆ ಕಾರ್ಯಕ್ರಮದ ವೀಡಿಯೋ, ಪೋಟೋ ಕೂಡ ನಮ್ಮ ಬಳಿಯಿವೆ. ನಮ್ಮ ತಂದೆ ಅವರ ಕೈಯಿಂದ ದುಡ್ಡು ಕೊಟ್ಟು ಎಲ್ಲಿಯೂ ಹಂಚಿಲ್ಲ ಎಂದು ಸ್ಪಷ್ಟನೆ ನೀಡಿರುವ ಯತೀಂದ್ರ ಸಿದ್ದರಾಮಯ್ಯ ಈ ಘಟನೆ ನಡೆದಿರುವುದು ಚುನಾವಣೆ ನೀತಿ ಸಂಹಿತೆಗೂ ಮೊದಲೇ! ಅಷ್ಟೆ ಅಲ್ಲದೆ, ತಂದೆ ಸ್ವತಃ ಕೈಯಿಂದ ಏನನ್ನು ಕೂಡ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

” ನಾನು ಚುನಾವಣೆಗೋಸ್ಕರ ಸಿದ್ದರಾಮಯ್ಯನವರು ಕುಕ್ಕರ್ ಕೊಟ್ಟಿದ್ದಾರೆಂದು ಹೇಳಿಲ್ಲ. ಆದರೂ ಮಾತಾಡುವಾಗ ನಾನು ಸರಿಯಾಗಿ ಮಾತಾಡದೇ ಇರಬಹುದು. ನನ್ನ ಹೇಳಿಕೆ ಆ ರೀತಿಯ ಅರ್ಥವನ್ನು ಕೊಟ್ಟಿರುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮೊದಲೇ ಈ ಘಟನೆ ನಡೆದಿದ್ದು, ನನ್ನ ತಂದೆ ಸ್ವತಃ ಕೈಯಿಂದ ಕುಕ್ಕರ್ ಹಾಗೂ ಐರನ್ ಬಾಕ್ಸ್ ನೀಡಿಲ್ಲ. ಇದರ ಬಗ್ಗೆ ನಾನು ಮಾತನಾಡಿದ್ದೇನೆ ಅಷ್ಟೇ “ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Lina Mukherjee: ಹಂದಿ ಮಾಂಸ ಎಫೆಕ್ಟ್- ಟಿಕ್ ಟಾಕ್ ಸ್ಟಾರ್ ಲೀನಾ ಮುಖರ್ಜಿಗೆ ಎರಡು ವರ್ಷ ಜೈಲು ಶಿಕ್ಷೆ !! ಅಷ್ಟಕ್ಕೂ ಆದದ್ದೇನು?

Leave A Reply