School Holiday: ಕರ್ನಾಟಕ ಬಂದ್ ಹಿನ್ನೆಲೆ; ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Share the Article

ನಾಳೆ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಸೆ.29ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ನ್ಯೂಸ್‌ 18 ಕನ್ನಡ ವರದಿ ಮಾಡಿದೆ.

ಸಾರ್ವಜನಿಕ ಸೇವೆಗಳು ನಾಳೆ ಬೆಳಗ್ಗೆಯಿಂದಲೇ ಬಂದ್‌ ಆಗುವುದರಿಂದ ಮಕ್ಕಳಿಗೆ ಅನಾನುಕೂಲ ಆತಂಕ ಸೃಷ್ಟಿ ಹೆಚ್ಚಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಹಾಸನದ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಿವರಾಮೇಗೌಡ ಈ ಕುರಿತು ಸೂಚನೆ  ನೀಡಿದ್ದಾರೆ. ಹಾಗಾಗಿ ನಾಳೆ ಬಸ್‌, ಆಟೋದಲ್ಲಿ ವ್ಯತ್ಯಯ ಉಂಟಾಗುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಮಾಡಿದೆ.

Leave A Reply