Lucknow: ಜ್ವರಕ್ಕೆ ತಪ್ಪಾದ ಇಂಜೆಕ್ಷನ್ ನೀಡಿದ ಡಾಕ್ಟರ್; ಯುವತಿಯ ಶವವನ್ನು ಎಸೆದು ವೈದ್ಯ ಪರಾರಿ!!!
ಲಕ್ನೋ: ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ 17 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ನಂತರ ಆಸ್ಪತ್ರೆಯ ಸಿಬ್ಬಂದಿ ಆಕೆಯ ಶವವನ್ನು ಹೊರಗೆ ನಿಲ್ಲಿಸಿದ್ದ ಮೋಟಾರ್ ಸೈಕಲ್ ಮೇಲೆ ಎಸೆದು, ಆಕೆ ಮೃತಪಟ್ಟಿರುವ ಬಗ್ಗೆಯೂ ತಿಳಿಸದೆ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ.
ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಪಲಾಯನ ಮಾಡಿದ್ದು, ಬಾಲಕಿಯ ಕುಟುಂಬದವರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಮೋಟಾರು ಸೈಕಲ್ನಲ್ಲಿ ಬಾಲಕಿ ನಿರ್ಜೀವವಾಗಿ ಮಲಗಿರುವ ಆಸ್ಪತ್ರೆಯ ಹೊರಗಿನ ವಿಡಿಯೋವೊಂದು ವೈರಲ್ ಆಗಿದೆ.
ಜ್ವರ ಬರುತ್ತಿದ್ದರಿಂದ ಭಾರ್ತಿ (17 ವರ್ಷ) ಎಂಬ ಯುವತಿಯವನ್ನು ಮಂಗಳವಾರ ಘಿರೋರ್ ಪ್ರದೇಶದ ಕರ್ಹಾಲ್ ರಸ್ತೆಯಲ್ಲಿರುವ ರಾಧಾ ಸ್ವಾಮಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಆಕೆಯ ಚಿಕ್ಕಮ್ಮ ಮನಿಶಾ ಹೇಳಿದ್ದಾರೆ.
ನಂತರ ವೈದ್ಯರು ಚುಚ್ಚುಮದ್ದನ್ನು ನೀಡಿದ್ದು, ಆಕೆಯ ಸ್ಥಿತಿ ಹದಗೆಟ್ಟಿತು ಎಂದು ಯುವತಿಯ ಚಿಕ್ಕಮ್ಮ ಆರೋಪಿಸಿದ್ದಾರೆ. ಭಾರತಿ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಹೇಳಿದರು ಮತ್ತು ನಮಗೇನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ನೋಡಲ್ ಅಧಿಕಾರಿಯು ಆಸ್ಪತ್ರೆಗೆ ಬಂದು ನೋಡಿದಾಗ ವೈದ್ಯರು ಅಥವಾ ಆಡಳಿತ ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಆಸ್ಪತ್ರೆಗೆ ಸೀಲ್ ಮಾಡಲು ಆದೇಶ ನೀಡಿದ್ದಾರೆ. ವೈದ್ಯನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಹಾಗೂ ಆಸ್ಪತ್ರೆಯ ರಿಜಿಸ್ಟ್ರೇಶನ್ ರದ್ದುಪಡಿಸಲಾಗುವುದು