Annabhagya: ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ

Latest news political news Distribution of 10 kg rice to 'Annabhagya' beneficiaries from October

Share the Article

Annabhagya: ಕಾಂಗ್ರೆಸ್ ಪಕ್ಷ 5ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದೇ ಯೋಜನೆಗಳ ಜಾರಿಗೆ ಮಾಡಿದೆ. ಇನ್ನು ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಈ ಮೊದಲು ಹಣವನ್ನು ನೀಡುತ್ತಿತ್ತು . ಇದೀಗ ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಒಂದಿದೆ. ಹೌದು, ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿ(Annabhagya) 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಯ ಹಣವನ್ನ ಸರ್ಕಾರ ನೀಡುತ್ತಿತ್ತು. ಸದ್ಯ ಈ ಕುರಿತು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಅಕ್ಕಿ ಖರೀದಿ ಕೊನೆ ಹಂತದ ಮಾತುಕತೆಯಲ್ಲಿದೆ. ಅನ್ನಭಾಗ್ಯ ಯೋಜನೆಯಡಿ ಇದುವರೆಗೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು, ಮುಂದಿನ ಅಕ್ಟೋಬರ್ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಜೊತೆ ಹೆಚ್ಚುವರಿ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ನೀಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಒಟ್ಟಿನಲ್ಲಿ 5 ಕೆಜಿ ಅಕ್ಕಿ ಬದಲು ಹಣ ಹಾಕುವ ವ್ಯವಸ್ಥೆಗೆ ಬ್ರೇಕ್ ಹಾಕಿ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಿಸಲಿದೆ. ಮುಖ್ಯವಾಗಿ ರಾಜ್ಯದಲ್ಲಿ ಬರ ಇದ್ದರೂ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಇದರಿಂದ ಕೃಷಿ ಚಟುವಟಿಕೆಗಳಿಗೆ ನೀರಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

 

ಇದನ್ನು ಓದಿ: Hear Attack: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ

Leave A Reply