Jagadish shettar: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಉಪಮುಖ್ಯಮಂತ್ರಿ ಪಟ್ಟ ?!

Karnataka Political news demand that jagadish Shettar be given the post of DCM latest news

Jagadish shettar: ಬಿಜೆಪಿ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಟಿಕೆಟ್ ವಿಧಾನಸಭಾ ಟಿಕೆಟ್ ಸಿಗದ ಕಾರಣ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಚುನಾವಣೆಯಲ್ಲಿ ಶೆಟ್ಟರ್ ಹೀನಾಯವಾಗಿ ಸೋತರೂ ಕೂಡ ಕಾಂಗ್ರೆಸ್ ವಿದಾನಪರಿಷತ್ ಸದಸ್ಯನನ್ನಾಗಿ ಮಾಡಿ ಗೌರವ ನೀಡಿತ್ತು. ಆದರೀಗ ಈ ಬೆನ್ನಲ್ಲೇ ಜಗದೀಶ್ ಶೆಟ್ಟರ್(Jagadish shettar) ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ವಿಚಾರವೊಂದು ಮುನ್ನಲೆಗೆ ಬಂದಿದೆ.

ಹೌದು, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ (DCM Post) ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾವು (Veerashaiva Mahasabha) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದೆ.

ಅಂದಹಾಗೆ ಜಗದೀಶ್ ಶೆಟ್ಟರ್ ಅವರು ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅಲ್ಲದೆ ಹುಬ್ಬಳ್ಳಿ-ಧಾರವಾಡ ಪ್ರದೇಶದಲ್ಲಿ ಪ್ರದೇಶದಲ್ಲಿ ಅವರಿಗೆ ಭಾರೀ ಹಿಡಿತವಿದೆ. ಹೀಗಾಗಿ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆಯನ್ನು (Lok Sabha Elections) ಗಮನದಲ್ಲಿಟ್ಟುಕೊಂಡು ಶೆಟ್ಟರ್‌ (Jagadish Shettar) ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಮಹಾಸಭಾದ ಹುಬ್ಬಳ್ಳಿ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್‌ ಯಂಟ್ರಾವಿ, ಸಿಎಂಗೆ ಪತ್ರ ಬರೆದಿದ್ದಾರೆ.

ಇನ್ನು ಇಷ್ಟೇ ಅಲ್ಲದೆ ವಿಧಾನಸಭಾ ಚುನಾವಣೆಯ ವೇಳೆ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದಾಗ ಇದೇ ಮಂಜುನಾಥ್ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆಲ್ಲಲಿದೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ‌ರು. ಆದರೆ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಹೇಶ್ ಟೆಂಗಿನಕಾಯಿ ಅವರು ಶೆಟ್ಟರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ:  Headache: ವಿಪರೀತ ತಲೆನೋವಿಗೆ 25ರ ಯುವಕ ಬಲಿ ?! ಏನಿದು ಹೊಸ ಕಾಯಿಲೆ ?!

Leave A Reply

Your email address will not be published.