Coconut Growers: ಮತ್ತೊಂದು ರೈತ ಹೋರಾಟಕ್ಕೆ ಸಾಕ್ಷಿಯಾಗಲಿದೆ ಕರ್ನಾಟಕ – ರಾಜಭವನದತ್ತ ಹೊರಟ ತೆಂಗು ಬೆಳೆಗಾರರು

Karnataka news Agriculture news coconut farmers plan rajbhavan chalo protest tomorrow

Coconut Growers: ತಮಿಳುನಾಡಿಗೆ ಮತ್ತೆ ಕಾವೇರಿ ನೀರು(Cauvery Issue)ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕ (Karnataka)ಮತ್ತೊಂದು ರೈತ ಹೋರಾಟಕ್ಕೆ ಸಾಕ್ಷಿಯಾಗಲಿದೆ.

ಹೌದು!!ತೆಂಗು ಬೆಳೆಗಾರರು(Coconut Growers)ಬೆಂಬಲ ಬೆಲೆಗೆ ಒತ್ತಾಯಿಸಿ ಹೋರಾಟಕ್ಕೆ ಕರೆ ನೀಡಿದ್ದು, ಹೀಗಾಗಿ, ನಾಳೆ ರಾಜಭವನ ಚಲೋ ನಡೆಸುವ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕಳೆದ 5-6 ವರ್ಷಗಳಿಂದ ಕೊಬ್ಬರಿ ಬೆಲೆ ಕ್ವಿಂಟಾಲ್ ಗೆ 18,000 ರೂಪಾಯಿಗಳಿಂದ ಕೇವಲ 7 ಸಾವಿರ ರೂಪಾಯಿಗೆ ಕುಸಿತ ಕಂಡಿದೆ. ಕೇಂದ್ರ ಸರ್ಕಾರದ(Central Government)ರೈತ ವಿರೋಧಿ ಆಮದು ಹಾಗೂ ರಫ್ತು ನೀತಿಯೇ ಬೆಲೆ ಕುಸಿತಕ್ಕೆ ಮುಖ್ಯ ಕಾರಣ ಎಂದು ಆರೋಪಿಸಿದ್ದಾರೆ. ಹೀಗಾಗಿ, ರಾಜ್ಯದ ತೆಂಗು ಬೆಳೆಗಾರರು ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗಾಗಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಲ್ಲಿನ ರೈತರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಕ್ವಿಂಟಾಲ್ ಕೊಬ್ಬರಿಗೆ 20,000 ರೂಪಾಯಿಗಳ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡುವ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 5,000 ರೂಪಾಯಿ ಹೆಚ್ಚುವರಿ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ತೆಂಗು ಬೆಳೆಗಾರರು ಪ್ರತಿಭಟನೆ ನಡೆಸಲು ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 3 ಮಂಗಳವಾರ ಕರ್ನಾಟಕ ರೈತ ಸಂಘದ ಸಹಕಾರದೊಂದಿಗೆ ತೆಂಗು ಬೆಳೆಗಾರರು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಇಂಡೋನೇಷ್ಯಾ, ಥೈಲ್ಯಾಂಡ್, ಮಲೇಷ್ಯಾದಿಂದ ತಾಳೆ ಎಣ್ಣೆ, ತೆಂಗಿನ ಎಣ್ಣೆ, ಬ್ರೆಜಿಲ್, ರಷ್ಯಾ, ಉಕ್ರೇನ್ ನಿಂದ ಸೋಯಾ ಎಣ್ಣೆಗಳನ್ನು ಭಾರತ ಆಮದು ಮಾಡಿಕೊಳ್ಳುವ ಪರಿಣಾಮ ಭಾರತದಲ್ಲಿ ತೆಂಗಿನ ಉತ್ಪನ್ನಗಳಿಗೆ ಬೇಡಿಕೆ ಇಲ್ಲದಂತಾಗಿದೆ.ಇದರ ಪರಿಣಾಮದಿಂದಾಗಿ ಭಾರತದಲ್ಲಿರುವ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಸಂಘಟನೆಗಳು ಆಕ್ರೋಶ ಹೊರ ಹಾಕಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಮೊಬೈಲ್ ಟವರ್ ಏರಿದ ಭೂಪ ,ಕಾರಣ ಕೇಳಿದ್ರೆ ನಿಮಗೂ ಆಗಬಹುದು ಶಾಕ್!

Leave A Reply

Your email address will not be published.