Sullia: KVG ಎ.ಎಸ್ ರಾಮಕೃಷ್ಣ ಕೊಲೆ ಪ್ರಕರಣ- ಡಾ.ರೇಣುಕಾ ಪ್ರಸಾದ್ ಸೇರಿ ಐವರಿಗೆ ಶಿಕ್ಷೆ ಪ್ರಕಟ!
Latest sullia news KVG MS Ramakrishna murder case including Dr. Renukaprasad sentenced to Life imprisonment
Sullia: ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದ ಆರೋಪಿಗಳಿಗೆ ಇಂದು ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ದೋಷಿಗಳಾಗಿರುವ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ. ರೇಣುಕಾ ಪ್ರಸಾದ್ ಸೇರಿದಂತೆ ಆರೋಪಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿದೆ.
ವೀಡಿಯೋ ಕಾನ್ಪರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಾಧೀಶರು ಅಪರಾಧಿಗಳ ಅಹವಾಲು ಆಲಿಸಿ ಶಿಕ್ಷೆಯ ತೀರ್ಪು ಪ್ರಕಟಿಸಿದರು.
ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು. ಇಂದು ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.
ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡ ವಿಧಿಸಿ, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.
ಘಟನೆ ವಿವರ :
ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ (KVG Polytechnic College) ಪ್ರಾಂಶುಪಾಲರಾಗಿದ್ದ ಎ.ಎಸ್.ರಾಮಕೃಷ್ಣ ಅವರ ಹತ್ಯೆ ಪ್ರಕರಣದ( AS ramakrishna murder case) ತೀರ್ಪನ್ನು ರಾಜ್ಯ ಹೈಕೋರ್ಟ್ ಪ್ರಕಟ ಮಾಡಿದೆ. ಈ ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿ ಎಂದು ಹೈಕೋರ್ಟ್ ಈ ಮೊದಲು ಮಹತ್ವದ ತೀರ್ಪು ನೀಡಿ, ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟ ಮಾಡಿದೆ.
ಪ್ರಕರಣದ ಏಳು ಮಂದಿ ಆರೋಪಿಗಳ ಪೈಕಿ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ, ಶಂಕರ ಅವರನ್ನು ಮೃತ ಎ.ಎಸ್.ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ತೀರ್ಮಾನಿಸಿದ್ದು, ಏಳನೇ ಆರೋಪಿಯಾದ ಎಚ್.ಯು ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ಆದೇಶ ನೀಡಿದೆ. ಶಿಕ್ಷೆ ಪ್ರಮಾಣವನ್ನು ಅ.5ರಂದು ನಿಗದಿಪಡಿಸುವುದಾಗಿ ನ್ಯಾಯಪೀಠ ಹೇಳಿತ್ತು.
2011ರ ಎಪ್ರಿಲ್ ತಿಂಗಳಿನಲ್ಲಿ ಎ.ಎಸ್.ರಾಮಕೃಷ್ಣ ಅವರನ್ನು ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಪ್ರಕರಣದ ಪ್ರಮುಖ ಆರೋಪಿಯಾದ ರೇಣುಕಾ ಪ್ರಸಾದ್ ಸೇರಿ ಏಳು ಮಂದಿ ಆರೋಪಿಗಳನ್ನು 2016ರಲ್ಲಿ ಖುಲಾಸೆ ಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ರಾಜ್ಯ ಸರಕಾರ( ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.
ಪ್ರಕರಣದ ವಿವರ:
ಕೆ ವಿ ಚಿದಾನಂದ ಮತ್ತು ರೇಣುಕಾ ಪ್ರಸಾದ್ ಅವರು ಕುರುಂಜಿ ವೆಂಕಟರಣ ಗೌಡ ಅವರ ಮಕ್ಕಳು. ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸ್ಪ್ಲಿಂಟರ್ ಇನ್ಸ್ಟಿಟ್ಯೂಷನ್ಸ್ ನ ಸಂಸ್ಥಾಪಕರು ಕುರುಂಜಿ ವೆಂಕಟರಮಣ ಗೌಡ ಅವರು. ವಯಸ್ಸಾದ ಕಾರಣ ಅವರು ತಮ್ಮ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆಯನ್ನು ತಮ್ಮ ಮಕ್ಕಳಿಗೆ ವಹಿಸಿದ್ದರು. ಇದರಲ್ಲಿ ಎ ಎಸ್ ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದರು.
ಆಸ್ತಿ ನಿರ್ವಹಣೆ, ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ರಾಮಕೃಷ್ಣ ಅವರೇ ವಹಿಸಿದ್ದಾರೆ ಎಂದು ಭಾವಿಸಿದ ರೇಣುಕಾ ಪ್ರಸಾದ್ ಅವರು ರಾಮಕೃಷ್ಣ ಅವರ ಕೊಲೆಗೆ ಸುಪಾರಿ ನೀಡಿದ್ದರು. ಎ.28, 2011 ಬೆಳಗ್ಗೆ ಸರಿ ಸುಮಾರು 7.45ರ ವೇಳೆ ಅಂಬೆತಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ಮಾಡಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ರೇಣುಕಾ ಪ್ರಸಾದ್ ಮೊದಲ ಆರೋಪಿಯಾಗಿದ್ದರು. ಒಟ್ಟು ಏಳು ಮಂದಿ ಆರೋಪಿಗಳಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2016 ಅಕ್ಟೋಬರ್ 21 ರಂದು ಅವರನ್ನೆಲ್ಲ ಖುಲಾಸೆ ಗೊಳಿಸಿತ್ತು. ಆದರೆ 2017ರಲ್ಲಿ ಈ ಆದೇಶ ಪ್ರಶ್ನಿಸಿ ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್ಗೆ ಸಲ್ಲಿಸಲಾಗಿತ್ತು. ಇದೀಗ ರೇಣುಕಾಪ್ರಸಾದ್ ಸೇರಿ ಇತರೆ ಐವರು ಆರೋಪಿಗಳು ದೋಷಿಗಳೆಂದು ಹೈಕೋರ್ಟ್ ತೀರ್ಪುನ್ನು ಈ ಮೊದಲು ನೀಡಿ, ಇವತ್ತು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಿದೆ.
ಇದನ್ನು ಓದಿ: Mysore: ಮೆಡಿಸಿನ್ ಕೊಳ್ಳಲು ಮೆಡಿಕಲ್ ಗೆ ಬಂದ – ಆಲ್ಲೇ ಕುಸಿದು ಬಿದ್ದು ಪ್ರಾಣವನ್ನೂ ಬಿಟ್ಟ !!