Home Jobs Govt Job: ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ, ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಭರ್ಜರಿ ಆಫರ್! ಈ ಕೂಡಲೇ ಅರ್ಜಿ...

Govt Job: ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ, ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಭರ್ಜರಿ ಆಫರ್! ಈ ಕೂಡಲೇ ಅರ್ಜಿ ಸಲ್ಲಿಸಿ

Forest watcher recruitment 2023

Hindu neighbor gifts plot of land

Hindu neighbour gifts land to Muslim journalist

Forest watcher recruitment 2023: ಸರಕಾರಿ ಕೆಲಸದ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌. ಕರ್ನಾಟಕ ಅರಣ್ಯ ಇಲಾಖೆಯು ಮಂಗಳೂರು ವೃತ್ತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ(Forest watcher recruitment 2023). ಒಟ್ಟು ಹುದ್ದೆಗಳ ಸಂಖ್ಯೆ 20. ನೀವು ಕೇವಲ ಎಸ್‌ಎಸ್‌ಎಲ್‌ಸಿ ಪಾಸಾಗಿದ್ದರೆ ಸಾಕು ಈಗಲೇ ಅರ್ಜಿ ಸಲ್ಲಿಸಿ. ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಈ ಹುದ್ದೆಗೆ ಆಯ್ಕೆ ನಡೆಸಲಾಗುತ್ತದೆ. ಈ ಹುದ್ದೆಯ ಕುರಿತ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ.

ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ (ಸಾಮಾನ್ಯ) 06.08.2019ರ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು, 2019ರನ್ವಯ ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವೃತ್ತದಲ್ಲಿ ಖಾಲಿ ಇರುವ 20 (ಇಪ್ಪತ್ತು) ಅರಣ್ಯ ವೀಕ್ಷಕ ಗ್ರೂಪ್ ‘ಡಿ’ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅರ್ಜಿಸಲ್ಲಿಸುವ ವಿಧಾನ: ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ ಸೈಟ್ https://aranya.gov.in/ ಮೂಲಕ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸದರಿ ಆನ್‌ಲೈನ್ (Online) (ಎಲೆಕ್ಟ್ರಾನಿಕ್ ಮಾರ್ಗ) ವ್ಯವಸ್ಥೆಯ ಮೂಲಕ ಮಾತ್ರ ಸಲ್ಲಿಸತಕ್ಕದ್ದು ಈ ವಿಧಾನವನ್ನು ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ,

ಜನ್ಮ ದಿನಾಂಕ ದೃಢೀಕರಿಸುವ ಪ್ರಮಾಣ ಪತ್ರ, ನಿಗದಿತ ಶೈಕ್ಷಣಿಕ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ನಿಗದಿತ ಜಾತಿ/ಪುವರ್ಗ/ಗಾಮೀಣ/ಕನ್ನಡ ಮಾಧ್ಯಮ/ಯೋಜನಾ ನಿರಾಶ್ರಿತ/ಸೈನಿಕ ಸೇವೆ/ತೃತೀಯ ಲಿಂಗ ಅಭ್ಯರ್ಥಿಗಳು ಇತ್ಯಾದಿ ದೃಢೀಕರಣ ಪ್ರಮಾಣ ಪತ್ರಗಳನ್ನು ಆನ್‌ಲೈನ್ (Online) (ಎಲೆಕ್ಟ್ರಾನಿಕ್ ಮಾರ್ಗ) ಅರ್ಜಿ ಸಲ್ಲಿಸುವ ವೇಳೆಯಲ್ಲಿ ಅಪ್‌ಲೋಡ್ ಮಾಡತಕ್ಕದ್ದು, ಅಭ್ಯರ್ಥಿಯು ಯಾವ ಪ್ರಮಾಣ ಪತ್ರ/ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವೇಳೆ ಅಪ್‌ಲೋಡ್ ಮಾಡಿರುತ್ತಾರೆಯೋ ಅದೇ ಪಮಾಣ ಪತ್ರ/ ದಾಖಲೆಗಳನ್ನು ಆಯ್ಕೆ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿಯೂ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಇದನ್ನು ಯಾವುದೇ ಹಂತದಲ್ಲಿಯೂ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 27.09.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26.10.2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31.10.2023

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ, ಪ್ರವರ್ಗ ಎ, ಬಿ, ಎ ಮತ್ತು ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ
ಅರ್ಜಿ ಶುಲ್ಕ: ರೂ. 200/- + ಸೇವಾ ಶುಲ್ಕ ರೂ. 20/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ
ಅರ್ಜಿ ಶುಲ್ಕ, ರೂ. 100/- + ಸೇವಾ ಶುಲ್ಕ ರೂ. 20/-

ಅಭ್ಯರ್ಥಿಗಳು ಆನ್‌ಲೈನ್ (Online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರವೇ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಇದನ್ನು ನೊಂದಾಯಿತ ಅಂಚೆ ಇದನ್ನು ಹೊರತುಪಡಿಸಿ ನೇರವಾಗಿ/ಕೊರಿಯ‌ ಸಾಧಾರಣ ಅಂಚೆ, ಇ-ಮೇಲ್/ಮುದ್ರಾಂ/ಇತ್ಯಾದಿ ಯಾವುದೇ ಇತರ ವಿಧಾನಗಳ ಮುಖಾಂತರ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ, ಅಲ್ಲದೆ ಈ ಮೇಲೆ ನಮೂದಿಸಿದಂತೆ ಅರ್ಜಿ ಶುಲ್ಕ ಪಾವತಿ ವಿಧಾನವನ್ನು ಹೊರತುಪಡಿಸಿ ಬೇರೆ ಇತರ ವಿಧಾನ(ಡಿಡಿ/ ಚೆಕ್‌ ಪೋಸ್ಟಲ್ ಆರ್ಡರ್ ಇತ್ಯಾದಿ)ವನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: Rape on Student: ಶಾಲೆಯಲ್ಲಿ ಹೊಟ್ಟೆನೋವೆಂದು ಚೀರಾಡಿದ ಬಾಲಕಿ, ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಯಲಾಯ್ತು ರಹಸ್ಯ ವಿಷಯ!! ಏನದು?