OPS News: ಸರಕಾರಿ ನೌಕರರೇ ಹಳೆ ಪಿಂಚಣಿ ಜಾರಿ ಬಗ್ಗೆ ಸಿಎಂ ನೀಡಿದ್ರು BIG Update!
Karnataka govt news ops news CM gives BIG update on implementation of old pension for government employees
Old Pension Scheme: ಹಳೆ ಪಿಂಚಣಿ ಪದ್ಧತಿಯನ್ನು ಮರು ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿರುವವರಿಗೆ ಸರಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಿಗ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎನ್ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ಪದ್ಧತಿಯನ್ನು ಜಾರಿ ಮಾಡುವುದಾಗಿ ಆಶ್ವಾಸನೆ ನೀಡಿತ್ತು. ರಾಷ್ಟ್ರೀಯ ಪಿಂಚಣಿ ಪದ್ಧತಿ (National Pension Scheme) ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿಯನ್ನು ಊರ್ಜಿತಗೊಳಿಸುವುದರ ಕುರಿತು ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯ ಸರಕಾರಿ ನೌಕರರ ಸಂಘಟನೆಯ ಮುಖಂಡರುey ಕೃಷ್ಣಾದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ ನಂತರ ಈ ವಿಚಾರ ತಿಳಿದು ಬಂದಿದೆ.
ಎನ್ಪಿಎಸ್ ರದ್ದು ಮಾಡಿ ಒಪಿಎಸ್ ಜಾರಿಗೊಳಿಸುವ ಕುರಿತು, ಸಾಧಕ ಬಾಧಕಗಳನ್ನು ಮನವರಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಶೀಘ್ರವೇ ಒಂದು ಬೃಹತ್ ಸಮಾವೇಶ ಆಯೋಜಿಸಲು ನೌಕರರ ಸಂಘಟನೆಗಳಿಗೆ ತಿಳಿಸಿದ್ದಾರೆ. ಅಲ್ಲಿ ಒಪಿಎಸ್ ಮರು ಜಾರಿಯ ಘೋಷಣೆ ಮಾಡುವುದಾಗಿ ಹೇಳಿದ್ದಾರೆ ಸಿಎಂ.
ಇದನ್ನೂ ಓದಿ: BBK 10: ಬಿಗ್ಬಾಸ್ ಮನೆಗೆ ಹೋದ MLA ಪ್ರದೀಪ್ ಈಶ್ವರ್ ಪಡೆದ ಸಂಭಾವನೆ ಎಷ್ಟು ಗೊತ್ತೇ?