Bengaluru Kambala 2023: ಬೆಂಗಳೂರು ಕಂಬಳಕ್ಕೆ ಹೊಡೀತು ಬಂಪರ್ ಲಾಟ್ರಿ- ಸರ್ಕಾರದಿಂದ 1 ಕೋಟಿ ಸಹಾಯಧನ ಘೋಷಿಸಿದ ಡಿಸಿಎಂ

bengaluru news kambala news dcm dk shivakumar announced one crore subsidy for bengaluru kambala latest news

Bengaluru Kambala: ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ(Bengaluru Kambala)- ನಮ್ಮ ಕಂಬಳದ ಕರೆಪೂಜೆಯನ್ನು (ಗುದ್ದಲಿ ಪೂಜೆ) ಡಿಸಿಎಂ ಡಿ.ಕೆ.ಶಿವಕುಮಾರ್ ರವರು ನೆರವೇರಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ನೀಡುವುದಾಗಿ ಘೋಷಿಸಿದ್ದಾರೆ.

 

ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ)ಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೆರವೇರಿಸಿದ್ದು, ಈ ವೇಳೆ ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವ ಕುರಿತು ಡಿಸಿಎಂ ಭರವಸೆ ನೀಡಿದ್ದಾರೆ. 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುತ್ತದೆ. ದೇಸಿ ಮತ್ತು ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

“ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿಯಾಗಿದ್ದು, ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋಧ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಸಿದ್ದಿ ಪಡೆದಿದ್ದಾರೆ.ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ” ಎಂದು ಡಿಕೆ ಶಿವಕುಮಾರ್ ಅವರು ಬಣ್ಣಿಸಿದ್ದಾರೆ.

 

ಇದನ್ನು ಓದಿ: RBI Big Action: ಈ ಬ್ಯಾಂಕ್ ವಿರುದ್ದ ರಿಸರ್ವ್ ಬ್ಯಾಂಕ್ ತುರ್ತು ಕ್ರಮ: ಗ್ರಾಹಕರ ಮೇಲೆ ಏನು ಪರಿಣಾಮ ಬೀರಲಿದೆ?

Leave A Reply

Your email address will not be published.