Mangalore: ಹಮಾಸ್ ಉಗ್ರರಿಗೆ ಬೆಂಬಲ ಘೋಷಿಸಿದ ವ್ಯಕ್ತಿ ಅಂದರ್, ವಿಡಿಯೋ ವೈರಲ್ ಆದ ತಕ್ಷಣ ಬೀದಿಗಿಳಿದ ಪೊಲೀಸರು !

ಉಗ್ರರನ್ನು ಬೆಂಬಲಿಸಿದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಉಗ್ರರನ್ನು ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ. ಈ ಮಂಗಳೂರಿನ ವ್ಯಕ್ತಿಯನ್ನು ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಎಂದು ಗುರುತಿಸಲಾಗಿದ್ದು ಈಗ ಈತನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಜಾಕಿರ್ ಯಾನೆ ಜಾಕಿ ಹಮಾಸ್ ಉಗ್ರರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದ. ಈತ ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಭಾರೀ ವೈರಲ್ ಆಗಿತ್ತು. ಈ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಈತನ ಯೋಚನೆ ಮತ್ತು ವಿಡಿಯೋದಿಂದ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಕಾರ್ಯ ಪ್ರವೃತ್ತ ಆಗಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿಕೊಂಡಿದ್ದರು. ಈಗ ಆರೋಪಿ ಜಾಕಿರ್ ಅಲಿಯಾಸ್ ಜಾಕಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಈ ಹಿಂದೆ ಪೋಲಿಸ್ ಗೆ ಬೇಕಾದವನೆ ಆಗಿದ್ದು, ಈತನ ಮೇಲೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

 

ಇದನ್ನು ಓದಿ: ಪರೀಕ್ಷೆ ಬರೆಯುತ್ತಿದ್ದ ಯುವತಿಯನ್ನು ಕರೆದ ಕಿರಾತಕರು! ನಂತರ ಆಟೋದಲ್ಲಿ ಕರೆದೊಯ್ದು ಸಾಮೂಹಿಕ ರೇಪ್ !

Leave A Reply

Your email address will not be published.