Madhu bangarappa: ಶಿಕ್ಷಕ ಹುದ್ದೆ ಆಕಾಂಕ್ಷಿಗಳೇ ಗಮನಿಸಿ – ಹೊಸ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಕೊಟ್ರು ಬಿಗ್ ಅಪ್ಡೇಟ್
Karnataka news govt job news Minister madhu bangarappa gave big update about teacher recruitment process
Madhu bangarappa: ಇತ್ತೀಚೆಗಷ್ಟೆ ಕರ್ನಾಟಕದ ಕ್ರಿಯಾಶೀಲ ಹಾಗೂ ವಿನೂತನ ಆಲೋಚನೆಗಳನ್ನು ಹೊಂದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, 13,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಮಾಹಿತಿ ನೀಡಿದ್ದಾರು. ಆದರೀಗ ಈ ಬೆನ್ನಲ್ಲೇ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ಮೊನ್ನೆ ತಾನೆ ರಾಜ್ಯದಲ್ಲಿ 13,500 ಶಿಕ್ಷಕರ ನೇಮಕಾತಿಗೆ ಉಚ್ಚ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಈ ಬೆನ್ನಲ್ಲೇ ತಮ್ಮ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಿರುವ ಶಿಕ್ಷಣ ಸಚಿವರು ಈ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದು, ಶೀಘ್ರದಲ್ಲಿಯೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು 13500 ಶಿಕ್ಷಕರನ್ನು ಭರ್ತಿ ಮಾಡಿಕೊಂಡರೆ ಬಹುತೇಕ ಶಿಕ್ಷಕರ ಸಮಸ್ಯೆ ಬಗೆಹರಿಯಲಿದೆ. ಮುಂದಿನ ಹಂತದಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗೆ ಗಮನಹರಿಸಲಾಗುತ್ತದೆ ಎಂದರು. ಅಲ್ಲದೆ ರಾಜ್ಯದಲ್ಲಿ ಎನ್ಇಪಿ ಬದಲು ಎಸ್ಇಪಿ ಜಾರಿಗೆ ತರಲು ತಜ್ಞರ ಸಮಿತಿ ರಚಿಸಲಾಗಿದೆ. ನಮ್ಮ ನೆಲದ ಇತಿಹಾಸ, ಸಂಸ್ಕೃತಿಗೆ ಪೂರಕವಾದ ಶಿಕ್ಷಣ ನೀತಿ ಇರಬೇಕಾದರೆ ಅದು ರಾಜ್ಯ ಶಿಕ್ಷಣ ನೀತಿಯಿಂದ ಮಾತ್ರ ಸಾಧ್ಯ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Bigg boss-10: ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಹೋಗೋದು ಇವರೇನಾ ?!