Gruha Lakshmi Yojana: BPL ಕಾರ್ಡ್ ತಿದ್ದುಪಡಿಗೆ ಇರೋದಿನ್ನು 3 ದಿನ ಮಾತ್ರ – ಆದ್ರೆ ಮಾಡಿಸಲು ಇವರಿಗೆ ಮಾತ್ರ ಅವಕಾಶ
Gruha Lakshmi Yojana good news for BPL Card Holder latest updates
BPL Card Updates: ಬಿಪಿಎಲ್ ಪಡಿತರ ಚೀಟಿದಾರರಿಗೆ ಮತ್ತೊಂದು ಮಹತ್ವದ ಮಾಹಿತಿ ಇಲ್ಲಿದೆ ನೋಡಿ. ರಾಜ್ಯ ಸರಕಾರ ಗ್ಯಾರಂಟಿ ಯೋಜನೆ ಜಾರಿಯಾದ ಬಳಿಕ ಬಿಪಿಎಲ್ ಕಾರ್ಡ್ (BPL Card Holder) ಹೊಂದಿರುವವರ ಸಂಖ್ಯೆ ಹೆಚ್ಚಾಗಿದೆ. ಬಡತನ ರೇಖೆಗಿಂತ ಕೆಳಗಿರುವ (BPL )ಕಾರ್ಡ್ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಈ ರೇಷನ್ ಕಾರ್ಡ್ (Ration Card) ಮೂಲಕ ಬಿಪಿಎಲ್ ಕಾರ್ಡ್ ಅನ್ನಭಾಗ್ಯ ಮತ್ತು ಗೃಹ ಲಕ್ಷ್ಮಿಯಂತಹ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ.
ಪಡಿತರ ಚೀಟಿಯಲ್ಲಿನ(BPL Card Updates)ಫಲಾನುಭವಿಗಳ ಮಾಹಿತಿ ತಿದ್ದುಪಡಿ ಮತ್ತು ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರಿಸಲು ಆಹಾರ ಇಲಾಖೆ ಮತ್ತೊಮ್ಮೆ ಅನುವು ಮಾಡಿಕೊಟ್ಟಿದೆ.ಬಿಪಿಎಲ್ ಕಾರ್ಡ್‌ಗಳಲ್ಲಿ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಸಲಹೆಗಳನ್ನು ನೀಡಬಹುದಾಗಿದೆ. ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿದಾರರಿಗೆ ಹೆಸರು ತಿದ್ದುಪಡಿಗೆ ಅಕ್ಟೋಬರ್ 19, 20 ಮತ್ತು 21 ರಂದು ಅನುವು ಮಾಡಿಕೊಡಲಾಗಿದೆ. ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳ ಜನರು ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: Dakshina Kannada: ಕೈ ಕೊಟ್ಟ ಪ್ರೀತಿ; ನೇಣಿಗೆ ಕೊರಳೊಡ್ಡಿದ ಯುವಕ