Home Karnataka State Politics Updates H D kumarswamy: ಸಿದ್ದರಾಮಯ್ಯರ ‘ಸಿದ್ದಲೀಲೆ’ ಬಿಡುಗಡೆ ಮಾಡ್ಲಾ ?! ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ...

H D kumarswamy: ಸಿದ್ದರಾಮಯ್ಯರ ‘ಸಿದ್ದಲೀಲೆ’ ಬಿಡುಗಡೆ ಮಾಡ್ಲಾ ?! ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ !!

HD kumaraswamy

Hindu neighbor gifts plot of land

Hindu neighbour gifts land to Muslim journalist

HD kumaraswamy: ರಾಜ್ಯದಲ್ಲಿ ದಸರಾ ಹಬ್ಬ ಕಳೆಗಟ್ಟಿದರೂ ಕೂಡ ನಮ್ಮ ರಾಜಕೀಯ ನಾಯಕರುಗಳ ಆರೋಪ ಪ್ರತ್ಯಾರೋಪಗಳು ಮಾಮೂಲಂತೆ ನಡೆಯುತ್ತಲೇ ಇದೆ. ಹಬ್ಬದ ನಡುವೆಯೇ ಕೆಲ ದಿನಗಳಿಂದ ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ(C M Siddaramaiah) ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ(HD kumaraswamy) ಅವರು ಕೆಲವು ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತ ರಾಜ್ಯದಲ್ಲಿ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಇದೀಗ ಕು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಕುರಿತು ಹೊಸ ಬಾಂಬ್ ಸಿಡಿಸಿದ್ದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಹೌದು, ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಮತ್ತು ಇಂಡಿಯಾ ಮ್ಯಾಚ್ ಅನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವೀಕ್ಷಿಸಿದ.ರು ಇದನ್ನೇ ಗುರಿಯಾಗಿಸಿಕೊಂಡು ಕುಮಾರಸ್ವಾಮಿ ಅವರು ರಾಜಕೀಯ ರಾಜ್ಯ ನಡೆಸುವುದು ಬಿಟ್ಟು ಕ್ರಿಕೆಟ್ ನೋಡಲು ಪಾಕಿಸ್ತಾನಕ್ಕೆ ಸಪೋರ್ಟ್ ನೀಡಲು ಹೋಗಿದ್ದೀರಾ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಪ್ರತ್ಯಾರೋಪ ಮಾಡಿದಂತಹ ಸಿಎಂ ಸಿದ್ದರಾಮಯ್ಯ ನಿಮ್ಮ ಹಾಗೆ ನಾವು ಹೋಟೆಲ್ಗಳಲ್ಲಿ ಕುಳಿತು ಸರ್ಕಾರ ನಡೆಸುವುದಿಲ್ಲ ಎಂದು ತಿರುಗಿ ತಿವಿದಿದ್ದರು. ಇದೇ ಮಾತುಗಳು ಆರೋಪ ಪ್ರತ್ಯಾರೋಪಗಳೊಂದಿಗೆ ಬೆಳೆಯುತ್ತಾ ಹೋಯಿತು. ಇದೀಗ ಮತ್ತೆ ಮಾತಲ್ಲಿ ಗುಮ್ಮಿರುವ ಕುಮಾರಸ್ವಾಮಿ ಅವರು ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ‘ಸಿದ್ದಲೀಲೆಯ’ನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಸವಾಲ್‌ ಹಾಕಿದ್ದಾರೆ.

ಇಷ್ಟೇ ಅಲ್ಲದೆ ತಮ್ಮ ಟ್ವಿಟ್ಟರ್ ನಲ್ಲಿ ‘ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು @siddaramaiah ನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ?’

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು?
ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!!’ ಎಂದೂ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shobha karandlaje: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಹೆಸರು ಫೈನಲ್ ?! ಕೊನೆಗೂ ಮೌನ ಮುರಿದ ಶೋಭಕ್ಕ ಹೇಳಿದ್ದಿಷ್ಟು