Madhu bangarappa: ಬೆಳ್ಳಂಬೆಳಗ್ಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಮಹತ್ವದ ಮಾಹಿತಿ ಹಂಚಿಕೊಂಡ ಶಿಕ್ಷಣ ಇಲಾಖೆ !!

Education News Good News for State Govt School children Distribution of Special Nutritious Food

Share the Article

 

Govt School children: ವಿದ್ಯಾರ್ಥಿಗಳು ಉತ್ತಮ ಕಲಿಕೆ ಮಾಡಬೇಕು, ಉತ್ತಮ ಶಿಕ್ಷಣ ದೊರೆತು, ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬುದು ನಮ್ಮ ಶಿಕ್ಷಣ ಇಲಾಖೆಯ ಮೂಲ ಉದ್ದೇಶ. ಹೀಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ( Govt School children) ಇಲಾಖೆಯು ಆಗಾಗ ಸಂತೋಷದ ಸುದ್ದಿಗಳನ್ನು ನೀಡುತ್ತಿರುತ್ತದೆ. ಇದಕ್ಕಾಗಿ ಹಲವಾರು ಅನುಕೂಲಗಳನ್ನು ಮಾಡಿಕೊಡುತ್ತದೆ. ಅಂತೆಯೇ ಇದೀಗ ಇಲಾಖೆಯು ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.

ಹೌದು, ಕರ್ನಾಟಕ ಸರ್ಕಾರವು ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ ನಿವಾರಣೆಗಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ಮಕ್ಕಳಿಗೆ ನವೆಂಬರ್ 23ರಿಂದ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಿಸುವುದಕ್ಕೆ ನಿರ್ಧಾರ ಮಾಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ರಾಜ್ಯದ ಸರ್ಕಾರಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಆಹಾರವನ್ನು ಶಾಲೆಗಳಲ್ಲಿ ನೀಡಬೇಕು ಎಂಬುದು ಸಿಎಂ ಸಿದ್ಧರಾಮಯ್ಯ ಅವರ ಸೂಚನೆಯಾಗಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈಗಾಗಲೇ ಮೊಚ್ಚೆ ನೀಡಲಾಗುತ್ತಿತ್ತು. ವಾರಕ್ಕೆ ಒಂದು ಕೊಡುತ್ತಿದ್ದಂತ ಮೊಟ್ಟೆಯನ್ನು ಎರಡು ಮಾಡಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಕಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿದೆ. ಇದರ ಜೊತೆಗೆ ನವೆಂಬರ್.23ರಿಂದ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರವನ್ನು ಕೂಡ ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: D V Sadananda gouda: ಮಾಜಿ ಸಿಎಂ ಸದಾನಂದಗೌಡಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ !!

Leave A Reply

Your email address will not be published.