CM Siddaramaiah: ಸಿಎಂ ಸಿದ್ದರಾಮಯ್ಯನಿಗೆ ಖಡಕ್ ವಾರ್ನಿಂಗ್ ನೀಡಿದ ಕೇಂದ್ರ ಸಚಿವ ಶೇಖಾವತ್- ಯಾಕಾಗಿ ಗೊತ್ತೆ?!

Political news Central minister gajendra singh ask cm siddaramayya to don't spread lies latest news

CM Siddaramaiah :ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಕೇಂದ್ರದ ಜಲಸಂಪನ್ಮೂಲ ಖಾತೆ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ (Gajendra Singh Shekhawat) ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಕೇಂದ್ರ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿ ಉತ್ತರ ನೀಡಿ ಮೋದಿ (AnswerMadi Modi) ಅಭಿಯಾನ ನಡೆಸುತ್ತಿದ್ದಾರೆ. ಇದರಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಇನ್ನೂ ಕೂಡ ಅನುಮತಿ ನೀಡದೆ ಇರುವುದನ್ನು ಪ್ರಶ್ನೆ ಮಾಡಿದ್ದರು. ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡಬೇಡಿ ಎಂದು ಕೇಂದ್ರದ ಜಲಸಂಪನ್ಮೂಲ ಖಾತೆ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ (Gajendra Singh Shekhawat) ಅವರು ಉತ್ತರ ನೀಡಿದ್ದಲ್ಲದೆ ಕ್ಲಾಸ್‌ ಕೂಡ ತೆಗೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ ಪ್ರಶ್ನೆ?
ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರು ನಗರದ ಅವಶ್ಯಕತೆ ಬೇಕಾದಷ್ಟು ನೀರು ಒದಗಿಸುವುದು ದೊಡ್ಡ ಸವಾಲಾಗಿದೆ. ಹೀಗಾಗಿ, ಸಿದ್ಧಪಡಿಸಿರುವ ಯೋಜನೆ ಮೇಕೆದಾಟು ಕೇಂದ್ರ ಸರ್ಕಾರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕಾವೇರಿ ನಮ್ಮದು, ಮಳೆಗಾಲದಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನಮ್ಮ ಪಾಲಿನ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ಇನ್ನೆಷ್ಟು ವರ್ಷ ಕಾಯಬೇಕು? ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರ ಪ್ರಶ್ನೆ ಎಂದು ಸಿದ್ದರಾಮಯ್ಯನವರು ಕೇಳಿದ್ದರು.

ಗಜೇಂದ್ರ ಸಿಂಗ್‌ ಶೇಖಾವತ್‌ ಹೇಳಿದ್ದು ಹೀಗೆ:
ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಹರಡಿ ಸಮಾಜದ ಶಾಂತಿ ಕದಡುವ ಪ್ರಯತ್ನ ನಡೆಸುತ್ತಿದೆ.
ಕಾವೇರಿ ನೀರು ನಿರ್ವಹಣಾ ಮಂಡಳಿಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಿದ್ದು, ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಇಲ್ಲದೆ ಇರುವ ಹಿನ್ನೆಲೆ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ, ಇದು ಕೇಂದ್ರದ ತಪ್ಪಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದ್ದು, ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಂದಿಲ್ಲ ಎಂಬುದು ವಿಪರ್ಯಾಸ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶದ ಬಗ್ಗೆ ನಿಮಗೂ ಕೂಡ ಅರಿವಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ಕಾಣುತ್ತದೆ. ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದನೆ ನೀಡಲಾಗಿದೆ. ಇದೆಲ್ಲದರ ನಡುವೆ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ಎಲ್ಲರಿಗೂ ಗೊತ್ತಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ನೀಡುತ್ತಿರುವುದು ವಿಪರ್ಯಾಸ ಎಂದು ಕೇಂದ್ರದ ಜಲಸಂಪನ್ಮೂಲ ಖಾತೆ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಹೇಳಿದ್ದಾರೆ.

 

ಇದನ್ನು ಓದಿ: ವಿದ್ಯಾರ್ಥಿಗಳೇ ಈ ಯೋಜನೆಯಡಿ ನಿಮ್ಮ ಕೈ ಸೇರುತ್ತೆ 20,000 ಸ್ಕಾಲರ್ ಶಿಪ್ – ಆದ್ರೆ ಈ ಕೆಲಸ ಮಾಡಿದ್ರೆ ಮಾತ್ರ

Leave A Reply

Your email address will not be published.