Kannada Rajyotsava: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳು, ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ – ರಾಜ್ಯೋತ್ಸವದಂದೇ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ !!

CM Siddaramaiah Announce Free Electricity and water For Government Schools On Kannada Rajyotsava Day latest news

Kannada Rajyotsava Gift to Government schools: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಈಗಾಗಲೇ ಹಲವು ಉಚಿತಗಳ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ಸರ್ಕಾರಿ ಶಾಲೆ ಮಕ್ಕಳಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಡುಗೊರೆ (kannada Rajyotsava Gift to Government schools)ಒದಗಿಸುವ ನಿಟ್ಟಿನಲ್ಲಿ ಉಚಿತ ವಿದ್ಯುತ್‌ ಹಾಗೂ ನೀರು ಒದಗಿಸುವ ಘೋಷಣೆ ಮಾಡಿದೆ.

ಹೌದು, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಈ ಸಮಯದಲ್ಲಿ, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು ಅಗತ್ಯ. ಅದಕ್ಕಾಗಿ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ಕಲ್ಪನೆ ತಪ್ಪು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಮನವರಿಕೆ ಮಾಡಿದರು. ಇನ್ನು ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಮುಖ್ಯವಾಗಿ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.

ಇದನ್ನೂ ಓದಿ: ವಾಹನ ಸವಾರರಿಗೆ ಬಂತು ಟಫ್ ರೂಲ್ಸ್- ಇಂದಿನಿಂದ ಇಂಥ ವಾಹನಗಳಿಗೆ ಈ ನಿಯಮ ಪಾಲನೆ ಕಡ್ಡಾಯ !!

Leave A Reply

Your email address will not be published.