Home latest Chaitra Fraud Case: ಚೈತ್ರಾ ಟಿಕೆಟ್ ಡೀಲ್ ಪ್ರಕರಣ- ಸಿಸಿಬಿ ತನಿಖೆ ಕಂಪ್ಲೀಟ್, ಮುಂದೇನು?!

Chaitra Fraud Case: ಚೈತ್ರಾ ಟಿಕೆಟ್ ಡೀಲ್ ಪ್ರಕರಣ- ಸಿಸಿಬಿ ತನಿಖೆ ಕಂಪ್ಲೀಟ್, ಮುಂದೇನು?!

Hindu neighbor gifts plot of land

Hindu neighbour gifts land to Muslim journalist

Chaitra Fraud Case : ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವ ಭರವಸೆ ನೀಡಿ ಐದು ಕೋಟಿ ರೂ. ವಂಚಿಸಿದ ಚೈತ್ರಾ ವಂಚನೆ ಪ್ರಕರಣದ (Chaitra Fraud Case) ತನಿಖೆಯನ್ನು ಸಿಸಿಬಿ ಪೊಲೀಸರು (CCB Police) ಮುಗಿಸಿದ್ದಾರೆ ಎಂದು ತಿಳಿದು ಬಂದಿದೆ.

ಗೋವಿಂದ ಪೂಜಾರಿ ಬಳಿ ಒಪ್ಪಂದ ಮಾಡಿಕೊಂಡ ಕುರಿತ 10 ವಿಡಿಯೊವನ್ನು ಸಿಸಿಬಿ ಪೊಲೀಸರು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈ ಆಡಿಯೊ ಮತ್ತು ವಿಡಿಯೊಗಳ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ‌ ಉಲ್ಲೇಖ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳ ಮೊಬೈಲ್‌ಗಳ ಡೇಟಾ ರಿಟ್ರೀವ್ ವರದಿ ಕೂಡ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗುತ್ತದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಆಗಿದೆ ಎನ್ನಲಾಗಿದ್ದು, ಹೀಗಾಗಿ,ಈ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳನ್ನು ಸಿಸಿಬಿ ಪೊಲೀಸರು ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಎಂಎಲ್ಎ ಟಿಕೆಟ್ ಡೀಲ್ ಕುರಿತಂತೆ 68 ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಸಿಬಿ ತಂಡ ತನಿಖೆ ಪೂರ್ಣಗೊಳಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ನಡೆಸುತ್ತಿದೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌ಗೆ ಸಿದ್ದತೆ ನಡೆಯುತ್ತಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಈಗಾಗಲೇ 4 ಕೋಟಿ 11 ಲಕ್ಷ ರೂಪಾಯಿಯನ್ನು ಸಿಸಿಬಿ ರಿಕವರಿ ಮಾಡಲಾಗಿದೆ ಎನ್ನಲಾಗಿದ್ದು, ವಂಚನೆ ಪ್ರಕರಣದಲ್ಲಿ ದೊಡ್ಡ ಮಟ್ಟದ ರಿಕವರಿ ಆಗಿರುವ ಹಿನ್ನೆಲೆ ಚೈತ್ರಾ ಮತ್ತು ತಂಡಕ್ಕೆ ದೊಡ್ಡ ಸಮಸ್ಯೆ ಎದುರಾಗುವುದು ನಿಶ್ಚಿತ ಎನ್ನಲಾಗಿದೆ.

ಇದನ್ನೂ ಓದಿ : Petrol-Diesel Price Today: ಈ 13 ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಏರಿಕೆ – ಲಿಸ್ಟ್ ನಲ್ಲಿ ನಿಮ್ಮ ಜಿಲ್ಲೆಯೂ ಉಂಟಾ?!