Gruha Lakshmi Yojana: ಗೃಹಲಕ್ಷ್ಮೀ ಹಣ ಪಡೆಯೋ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ – ಹಣ ಜಮಾ ಮಾಡೋ ಕುರಿತು ಸರ್ಕಾರ ಕೊಡ್ತು ಬಿಗ್ ಅಪ್ಡೇಟ್ !!

Gruha Lakshmi Yojana updates Gruha Lakshmi money will arrive on time from this month latest news

Gruha Lakshmi Scheme : ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ(Gruha Lakshmi Scheme) ಆಗಸ್ಟ್‌ 30ರಂದು ಚಾಲನೆ ನೀಡಲಾಗಿದೆ. ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಮಾಸಿಕ 2,000 ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆಯ ಮೊದಲ ಕಂತು ಜಮೆಯಾಗಿದೆ. ಇದೀಗ, ಮನೆಯ ಮಹಿಳಾ ಯಜಮಾನಿಯರು ಎರಡನೇ ಕಂತಿನ ಹಣ ಕೆಲವರಿಗೆ ಜಮೆ ಆಗಿದ್ದು, ಇನ್ನೂ ಹೆಚ್ಚಿನ ಮಂದಿಗೆ ಜಮೆ ಆಗಿಲ್ಲ.

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ‌ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ. ಈ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗಿದೆ. ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. .

ಫಲಾನುಭವಿಗಳಿಗೆ ಹಣ ಜಮಾ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ ನಿಗದಿತ ಸಮಯದಲ್ಲಿ ಹಣ ತಲುಪಿಸುವುದಕ್ಕೆ ಆರ್ಥಿಕ ಇಲಾಖೆ ಡೆಡ್ ಲೈನ್ ನೀಡಿದ್ದು, ಹೀಗಾಗಿ ಇನ್ಮುಂದೆ ನಿಗದಿತ ಸಮಯಕ್ಕೆ ‘ಗೃಹಲಕ್ಷ್ಮಿ ಹಣ ತಲುಪಲಿದೆ. ಈ ಕುರಿತು ಆರ್ಥಿಕ ಇಲಾಖೆಯ ಡಿಡಿಒಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದ್ದು, ಪ್ರತಿ ತಿಂಗಳ 20 ನೇ ತಾರೀಖಿನೊಳಗೆ ಹಣ ಹಾಕಲು ಆರ್ಥಿಕ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Leave A Reply

Your email address will not be published.