Free current: ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್, ಉಚಿತ ವಿದ್ಯುತ್ ಯೂನಿಟ್ ಮಿತಿ ಹೆಚ್ಚಿಸಿದ ಸರ್ಕಾರ !! ಇವರಿಗೆ ಮಾತ್ರ ಅನ್ವಯ !!

Free current: ರಾಜ್ಯ ಸರ್ಕಾರವು ನಾಡಿನ ಜನತೆಗೆ ಭರ್ಜರಿ ಸುದ್ಧಿಯೊಂದನ್ನು ನೀಡಿದ್ದು, ಉಚಿತವಾಗಿ ನೀಡುತ್ತಿರುವ ವಿದ್ಯುತ್(Free current)ಯೂನಿಟ್ ಮಿತಿಯನ್ನು ಹೆಚ್ಚಳ ಮಾಡಿ ಮಹತ್ವದ ಆದೇಶವನ್ನು ಹೊರಡಿಸಿದೆ.

ಹೌದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಪಂಚ ಗ್ಯಾರಂಟಿಗಳ ಪೈಕಿ ‘ಗೃಹಜ್ಯೋತಿ'(Gruhajyoti) ಯೋಜನೆಯನ್ನು ಜಾರಿಗೊಳಿಸಿ ನಾಡಿನ ಜನತೆಗೆ 200 ಯೂನಿಟ್ ನಷ್ಟು ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದೆ. ಆದರೆ ಇದಕ್ಕೂ ಮೊದಲು ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಹಾಗು ಅಮೃತ ಜ್ಯೋತಿ ಎಂಬಂತಹ ಯೋಜನೆಗಳು ಕೂಡ ಜಾರಿಯಲ್ಲಿದ್ದವು. ಇವುಗಳಿಗೆ 40 ಯೂನಿಟ್‍ಗಳ ಮಿತಿಯಿತ್ತು. ಆದರೀಗ ಈ ವಿದ್ಯುತ್ ಯೋಜನೆಗಳನ್ನು ಹೊಸದಾಗಿ ಜಾರಿಗೆ ತಂದ ಗೃಹಜ್ಯೋತಿ ಜೊತೆ ವಿಲೀನ ಮಾಡಿ 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ.

ಅಂದಹಾಗೆ ವಿಧಾನಸೌಧದಲ್ಲಿ ಸೋಮವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ (Gruha Jyothi Scheme) ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ ಘೋಷಣೆ ಮಾಡಿದರು.

ಸಭೆಯ ಮುಖ್ಯಾಂಶಗಳನ್ನು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ‘2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ. ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ’

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ’ ಎಂದು ಟ್ವೀಟ್ ಮಾಡಿದ್ದಾರೆ

Leave A Reply

Your email address will not be published.