School Holiday: ನ. 14ಕ್ಕೆ ಮಕ್ಕಳ ದಿನಾಚರಣೆ- ದೀಪಾವಳಿಗೂ ಅಂದೇ ರಜೆ !! ಸರ್ಕಾರದಿಂದ ಬಂತು ಹೊಸ ಸುತ್ತೋಲೆ

Karnataka education news Deepavali festival holiday and children's day celebration in same day

School Holiday: ದೀಪಾವಳಿ ಹಬ್ಬಕ್ಕೆ(Deepavali) ಕ್ಷಣಗಣನೆ ಆರಂಭವಾಗಿದ್ದು, ಶಾಲೆಗಳಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆ ಆಚರಣೆ ಕಡ್ಡಾಯವಾಗಿದ್ದು ಆದರೆ ಈ ಬಾರಿ ದೀಪಾವಳಿ ಹಬ್ಬದ ಕಾರಣ ಶಾಲೆಗಳಿಗೆ ರಜೆ (School Holiday)ಇರುವ ಹಿನ್ನೆಲೆ ಶಾಲೆಯಲ್ಲಿ ಮಕ್ಕಳ ದಿನಾಚರಣೆ (Children’s Day)ಆಚರಣೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದ ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸುವ ಕುರಿತು ಡಿ. ಎಸ್.ಇ. ಆರ್‌. ಟಿ. ಬೆಂಗಳೂರು ನಿರ್ದೇಶಕರ ಪರವಾಗಿ ಈ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಹಾಗೂ ಇನ್ನಿತರ ಪ್ರಮುಖ ಜಯಂತಿಗಳನ್ನು ಕಡ್ಡಾಯವಾಗಿ ಆಯಾ ದಿನಗಳಂದು ಗೌರವ ಪೂರ್ವಕವಾಗಿ ಆಚರಿಸತಕ್ಕದ್ದು ಎಂದು ಮಾನ್ಯ ಆಯಕ್ತರ ಕಛೇರಿಯ ದಿನಾಂಕ 30/03/2023ರ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಪ್ರತಿ ವರ್ಷ ನವೆಂಬರ್ 14 ರಂದು ಭಾರತದ ಪಥಮ ಪ್ರಧಾನ ಮಂತ್ರಿಗಳಾದ ಪಂಡಿತ ಜವಾಹರ್ ಲಾಲ್ ನೆಹರುರವರ ಜಯಂತಿಯ ನಿಮಿತ್ತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರೆ, ಈ ಬಾರಿ ನವಂಬರ್ 14, ಮಂಗಳವಾರ ಆಚರಿಸಬೇಕಾದ ಮಕ್ಕಳ ದಿನಾಚರಣೆಯ ದಿನದಂದು ಬಲಿಪಾಡ್ಯಮಿ ದೀಪಾವಳಿಯ ಪ್ರಯುಕ್ತ ಹಬ್ಬವಿರುವ ಹಿನ್ನೆಲೆ ಸಾರ್ವತ್ರಿಕ ರಜೆಯಿರಲಿದೆ. ಹೀಗಾಗಿ, ಈ ಸಾಲಿನ ಮಕ್ಕಳ ದಿನಾಚರಣೆಯನ್ನು ನಂತರದ ಶಾಲಾ ದಿನದಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವುದು ಅವಶ್ಯಕ. ಈ ನಿಟ್ಟಿನಲ್ಲಿ ನವೆಂಬರ್ 14ರ ನಂತರದ ಶಾಲಾ ಕರ್ತವ್ಯದ ದಿನದಂದು, ಶಾಲಾ ಪ್ರಾರ್ಥನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ರಾಜ್ಯದ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಕ್ರಮವಹಿಸತಕ್ಕದ್ದು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: BBK Season 10: ಇವರೇ ನೋಡಿ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗೋರು !!

Leave A Reply

Your email address will not be published.