H D Kumarswamy: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ FIR ಜಡಿದೇ ಬಿಟ್ಟ ಕಾಂಗ್ರೆಸ್ ಸರ್ಕಾರ

H D kumarswamy: ದೀಪಾವಳಿ ದಿನವೇ ವಿದ್ಯುತ್ ಕದ್ದ ಆರೋಪದಲ್ಲಿ ಟಾಕ್ ಆಫ್ ದಿ ಡೇ ಆಗಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ(H D Kumarswamy) ಅವರ ವಿರುದ್ಧ ಕೊನೆಗೂ ಕಾಂಗ್ರೆಸ್ ಸರ್ಕಾರ FIR ದಾಖಲು ಮಾಡೇಬಿಟ್ಟಿದೆ.

ಹೌದು, ಬೆಂಗಳೂರಿನ ತಮ್ಮ ನಿವಾಸಕ್ಕೆ ದೀಪಾವಳಿಯ ಅಲಂಕಾರಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಅವರು ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು ಈ ಕುರಿತು ಫೋಟೋ, ವಿಡಿಯೋ ಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಈ ಬೆನ್ನಲ್ಲೇ ಕೊನೆಗೂ ಕಾಂಗ್ರೆಸ್ ಸರ್ಕಾರ ಎಚ್ಡಿಕೆ ವಿರುದ್ಧ FRI ಕೂಡ ದಾಖಲು ಮಾಡಿಬಿಟ್ಟಿದೆ.

ಅಂದಹಾಗೆ ವಿದ್ಯುತ್ ಕಳವು ಪ್ರಕರಣದಲ್ಲಿ (Electricity Illegal Connection) ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಇನ್ನು ಈ ವಿಚಾರವಾಗಿ ಮಾಜಿ ಸಿಎಂ ವಿದ್ಯುತ್‌ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಗಂಭೀರ ಆರೋಪ ಮಾಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಎಚ್ಡಿಕೆ, “ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ನೋಟಿಸ್ ನೀಡಲಿ. ನಾನು ದಂಡ ಕಟ್ಟುತ್ತೇನೆ. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ ಎಂದಿದ್ದಾರೆ.

ಅಲ್ಲದೆ ಸೋಮವಾರ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ ಎಂದು ಕಿಡಿಕಾರಿದ್ದಾರೆ.

 

ಇದನ್ನು ಓದಿ: Alert: ಅಪ್ಪಿತಪ್ಪಿಯೂ ವಾಟ್ಸಪ್ ನಲ್ಲಿ ಬರೋ ಈ ಮೆಸೇಜ್ ಗಳನ್ನು ಕ್ಲಿಕ್ ಮಾಡಬೇಡಿ.

Leave A Reply

Your email address will not be published.