Dakshina kannada: ದಕ್ಷಿಣ ಕನ್ನಡದ ಐವರು ಬಜರಂಗದಳದ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್

Dakshina Kannada news deportation notice issued to 5 Mangaluru bajarang dal activists

Mangaluru bajarang dal activists: ಹಿಂದೂಗಳು ಹಾಗೂ ಬಜರಂಗದಳದ ಕಾರ್ಯಕರ್ತರ ಭದ್ರಕೋಟೆಯೆನಿಸಿರುವ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದ್ದು, ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ( Mangaluru bajarang dal activists) ಗಡೀಪಾರು ನೋಟೀಸ್ ನೀಡಲಾಗಿದೆ.

ಹೌದು, ಕೋಮು ಗಲಬೆಗಳ ವಿಚಾರವಾಗಿ ಸದಾ ಭೂದಿ ಮುಚ್ಚಿದ ಕೆಂಡದಂತಿರುವ ದ.ಕ ಜಿಲ್ಲೆಯಲ್ಲಿ ಮತ್ತೆ ಗಡಿಪಾರು ಕೂಗು ಕೇಳಿಬಂದಿದ್ದು, ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್‌ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ಪೊಲೀಸರು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಅವರನ್ನು ಬೇರೆ ಜಿಲ್ಲೆಗಳಿಗೆ ಏಕೆ ಗಡಿಪಾರು ಮಾಡಬಾರದು ಎಂದು ಸಹ ನೋಟಿಸ್‌ನಲ್ಲಿ ಕೇಳಲಾಗಿದೆ. ಈ ಪ್ರಶ್ನೆಯ ಜೊತೆಗೆ ಪ್ರಶ್ನಿಸಿ ನವೆಂಬರ್ 22ರಂದು ಪುತ್ತೂರಿನಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಅಂದಹಾಗೆ ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರ ಅಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: B Y Vijayendra : ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದು ಕೇವಲ ಇಷ್ಟು ಸಮಯ ಮಾತ್ರ !!

Leave A Reply

Your email address will not be published.