B Y Vijayendra: ನನ್ನನ್ನು ರಾಜ್ಯಾಧ್ಯಕ್ಷ ಮಾಡಿದ್ಯಾರು ಗೊತ್ತಾ ?! ಸತ್ಯಬಿಚ್ಚಿಟ್ಟ ವಿಜಯೇಂದ್ರ!!

Karnataka political news if anyone opposes me they oppose pm Modi Karnataka BJP President B Y Vijayendra

B Y Vijayendra: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲುಂಡ ರಾಜ್ಯ ಬಿಜೆಪಿಯಲ್ಲಿ ಈಗ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರ (BS yediyurappa) ಅವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ( B Y Vijayendra)ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.
ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದ್ದಾರೆ. ಈ ನಡುವೆ 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸುವುದೇ ತಮ್ಮ ಮೊದಲ ಆದ್ಯತೆ ಎಂಬುದಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿಯಲ್ಲಿ ‘ವಿಜಯ’ ಶಕೆ ಶುರುವಾಗಿದ್ದು, ಹಿರಿಯರ ಮುನಿಸನ್ನು ಬಗೆಹರಿಸಿ ಎಲ್ಲರನ್ನು ಜೊತೆಯಾಗಿ ಕರೆದೊಯ್ಯುವುದು ದೊಡ್ಡ ಸವಾಲಿನ ಕೆಲಸವೇ ಸರಿ!! ನನ್ನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದವರು ಯಾರು? ಯಡಿಯೂರಪ್ಪನಾ? ಖಂಡಿತ ಅಲ್ಲ!! ಅದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಎಂದು ವಿಜಯೇಂದ್ರ ಅವರು ಹೇಳಿಕೊಂಡಿದ್ದಾರೆ. ಕರ್ನಾಟಕದ ಎಲ್ಲಾ 28 ಸೀಟುಗಳನ್ನು ಗೆದ್ದು ಮೋದಿ ಅವರಿಗೆ ತಲುಪಿಸುವುದು ನನ್ನ ಗುರಿಯಾಗಿದ್ದು, ಯಾರಾದರೂ ನನ್ನನ್ನು ವಿರೋಧಿಸಿದರೆ ಅವರು ಮೋದಿಯನ್ನು ವಿರೋಧಿಸಿದಂತೆ ಎಂದು ಇದೇ ವೇಳೆ ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿದ್ದಾರೆ.

ವಿಜಯೇಂದ್ರ ಅವರು, ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನೊಂದಿಗೆ ಮಾತನಾಡಿದ್ದು, ಈ ಸಂದರ್ಭ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಪ್ರಲ್ಹಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ವಿ ಸೋಮಣ್ಣ ಒಳಗೊಂಡಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ರಾಜ್ಯ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಅತ್ಯಂತ ಉನ್ನತ ನಾಯಕರಾಗಿರುವ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಎಲ್ ಸಂತೋಷ್ ಅವರು ತನಗೆ ಮೊದಲ ಶುಭಾಶಯ ಕೋರಿದ್ದಾರೆ. ನಾಯಕರಾದ ವಿ ಸೋಮಣ್ಣ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಮಾತನಾಡುವುದಾಗಿ ವಿಜಯೇಂದ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: FRUITS ID: ರೈತರಿಗೆ ಕಂದಾಯ ಸಚಿವರು ನೀಡಿದ್ರು ಬಿಗ್ ಅಪ್ಡೇಟ್!! ಜಮೀನಿನ ಮಾಹಿತಿ ದಾಖಲು ಕುರಿತು ಸಚಿವರು ಏನಂದ್ರು?

Leave A Reply

Your email address will not be published.