BBMP ಯಿಂದ ಪಿಜಿ ಗಳಿಗೆ ಟಫ್ ರೂಲ್ಸ್: ಹೊಸ ಗೈಡ್ ಲೈನ್ ಬಿಡುಗಡೆ!!

Bengaluru news New Rules for PGs by BBMP New Guide Line Released

BBMP: ಬೆಂಗಳೂರು ನಗರದ ಪಿಜಿಗಳಿಗೆ(PGs) ಬಿಗ್ ಶಾಕ್ ನೀಡಲು ಬಿಬಿಎಂಪಿ (BBMP) ಮುಂದಾಗಿದೆ. ಬೆಂಗಳೂರು ನಗರದಲ್ಲಿ ಪಿಜಿಗಳಿರುವ ಅಕ್ಕ- ಪಕ್ಕದವರಿಂದ ಪಾಲಿಕೆಗೆ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಪಿಜಿಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲು ಮುಂದಾಗಿದೆ.

ಬೆಂಗಳೂರು ನಗರದಲ್ಲಿ ಬಿಬಿಎಂಪಿಯ ವಾಣಿಜ್ಯ ಪರವಾನಗಿ ಮತ್ತು ಸುರಕ್ಷತೆಯ ನಿಯಮ ಉಲ್ಲಂಘಿಸಿ ಹಲವು ಪಿಜಿಗಳು ನಡೆಯುತ್ತಿವೆ. ಇದನ್ನು ಪರಿಶೀಲಿಸಲು ಹಾಗೂ ವಾಣಿಜ್ಯ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಕುರಿತು ಮಾರ್ಗಸೂಚಿ ಹೊರಡಿಸಲಾಗುವುದು ಅಂತ ಬಿಬಿಎಂಪಿ‌ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಮಾಹಿತಿ ನೀಡಿದ್ದಾರೆ.

ದುಡ್ಡು ಮಾಡುವ ನಿಟ್ಟಿನಲ್ಲಿ ನಿಯಮ‌ ಮೀರಿ ಒಂದು ರೂಂನಲ್ಲಿ ಹೆಚ್ಚಿನ ಜನರನ್ನು ಹಾಕಲಾಗುತ್ತಿದ್ದು, ಇದರ ಜೊತೆಗೆ ಮೂಲ ಸೌಕರ್ಯಗಳನ್ನು ಸರಿಯಾಗಿ ಒದಗಿಸುತ್ತಿಲ್ಲ. ಒಂದು ಪಿಜಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಶೌಚಾಲಯದ ವ್ಯವಸ್ಥೆ ಕೂಡ ಇಲ್ಲ ಎಂಬ ಆರೋಪ ಕೇಳಿ ಬಂದಿದೆ.. ನಿಯಮ ಮೀರಿ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಿಂದ ಹೆಚ್ಚು ದೂರುಗಳು ಬಂದ ಹಿನ್ನೆಲೆ ಪಿಜಿಗಳಿಗೆ ಬಿಬಿಎಂಪಿಯಿಂದ ಹೊಸ ಗೈಡ್ ಲೈನ್ ರಿಲೀಸ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Elephant Attack : ಹಾಸನದ ಬೇಲೂರಲ್ಲಿ 20ಕ್ಕು ಅಧಿಕ ಗಜಪಡೆಗಳ ಜಾಲಿ ರೈಡ್! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!!

Leave A Reply

Your email address will not be published.