Mangaluru: ದಕ್ಷಿಣ ಕನ್ನಡದ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಘೋಷಣೆ – ವಿಜಯೇಂದ್ರ ಘೋಷಣೆ !!

Share the Article

Mangaluru: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ( Puttur)ಸೃಷ್ಟಿಯಾಗಿ ಹೊಗೆಯಾಡಿದ್ದ ಬಂಡಾಯದ ನಡುವೆ ರಾಜ್ಯ ಘಟಕದ ನೂತನ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೇಳಿಕೆ ಈಗ ಭಾರೀ ಕುತೂಹಲ ಮೂಡಿಸಿದೆ.

ರಾಜ್ಯ ಘಟಕದ ನೂತನ ಅಧ್ಯಕ್ಷ ಬಿ ವೈ ವಿಜಯೇಂದ್ರ (BY Vijayendra) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ (Mangaluru) ಭೇಟಿ ನೀಡಿದ್ದು, ಈ ಸಂದರ್ಭ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮತ್ತೆ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ‌ಬಂಡಾಯದಿಂದ ಸದ್ಯ ದಕ್ಷಿಣ ಕನ್ನಡ ಜಿಲ್ಲೆ ದೊಡ್ದ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ಹಲವು ಮಂದಿ ಸಂಸದ ಸ್ಥಾನದ ಟಿಕೆಟ್ ಆಕಾಂಕ್ಷಿಗಳು ಕಮಲ ಪಾಳಯದಲ್ಲಿದ್ದು, ಈ ರೀತಿಯ ಪರಿಸ್ಥಿತಿಯ ನಡುವೆ ಮತ್ತೆ ನಳಿನ್ ಗೆಲ್ಲಿಸಿ ಎಂದು ರಾಜ್ಯ ಘಟಕದ ನೂತನ ಅಧ್ಯಕ್ಷ ವಿಜಯೇಂದ್ರ ಕರೆಕೊಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ಪರಿಗಣಿಸಬೇಕಾಗಿದ್ದು, ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ವಿಜಯೇಂದ್ರರವರು ಕರೆ ನೀಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ಆಯ್ಕೆಗೆ ಕಮಲ ಪಾಳಯದ ಒಳಗೆಯೇ ತೀವ್ರ ವಿರೋಧವಿದ್ದು, ಹೀಗಿರುವಾಗ ವಿಜಯೇಂದ್ರ ಅವರು ನಳಿನ್ ಕುಮಾರ್ ಕಟೀಲ್ ಅವರ ಪರ ಬ್ಯಾಟಿಂಗ್ ಮಾಡಿರುವುದು ಒಳಜಗಳಕ್ಕೆ ನಾಂದಿ ಹಾಡಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ.

ಇದನ್ನು ಓದಿ: PSI Recruitment: PSI ಮರು ಪರೀಕ್ಷೆ ದಿನಾಂಕ ಫಿಕ್ಸ್- KEA ಯಿಂದ ಘೋಷಣೆ !!

Leave A Reply